ವೇದಿಕೆ ಒಂದೇ – ಪರಸ್ಪರರನ್ನು ಹಾಡಿ ಹೊಗಳಿಕೊಂಡ ಸಿದ್ದು-ಜಿಟಿಡಿ

Team Newsnap
1 Min Read

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಇಡೀ ರಾಜ್ಯದ ಗಮನ ಚಾಮುಂಡೇಶ್ವರಿ ಕ್ಷೇತ್ರದ ಸ್ಪರ್ಧಿಗಳಾಗಿದ್ದ ಸಿದ್ದರಾಮಯ್ಯ ಹಾಗೂ ಜಿ.ಟಿ.ದೇವೇಗೌಡ ಈ ಕ್ಷೇತ್ರದ ಗೆಲುವಿಗಾಗಿ ಕಾದಾಡಿದ್ದರು.

ಕೊನೆಗೂ ಜಿ.ಟಿ.ದೇವೇಗೌಡ ಗೆಲುವಿನ ನಗೆ ಬೀರಿದ್ದರು. ಆಗ ಪರಸ್ಪರ ಎದುರಾಳಿಗಳಾಗಿದ್ದ ಸಿದ್ದು ಮತ್ತು ಜಿಟಿಡಿ ಈಗ ಒಂದಾಗಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಪರಸ್ಪರರನ್ನು ಹಾಡಿ ಹೊಗಳಿದ್ದಾರೆ. ಆ ಮೂಲಕ ರಾಜಕೀಯ ವಲಯದಲ್ಲಿ ಬದಲಾವಣೆಯ ಸೂಚನೆ ನೀಡಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದ ಕೂರ್ಗಳ್ಳಿಯಲ್ಲಿ ಟ್ರಸ್ಟ್‌ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.

ಈ ವೇಳೆ ಇಬ್ಬರೂ ನಾಯಕರಿಗೆ ಜೆಸಿಬಿಯಲ್ಲಿ ಹೂ ಮಳೆ ಸುರಿಸಿ ಅದ್ದೂರಿ ಸ್ವಾಗತ ಕೋರಲಾಯಿತು. ಕಾರ್ಯಕ್ರಮದಲ್ಲಿ ಜಿ.ಟಿ.ದೇವೇಗೌಡ ಅವರು ತಮ್ಮ ಭಾಷಣದುದ್ದಕ್ಕೂ ಸಿದ್ದರಾಮಯ್ಯರ ಗುಣಗಾನ ಮಾಡಿದರು.

ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟಿದ್ದು ಚಾಮುಂಡೇಶ್ವರಿ ಕ್ಷೇತ್ರ. ಚುನಾವಣೆಯಲ್ಲಿ ಸೋಲು – ಗೆಲವು ಇದ್ದದ್ದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆದ್ದಿದ್ದೇನೆ, ಸೋತಿದ್ದೇನೆ. ಚುನಾವಣೆ ಆದ ಮೇಲೆ ಬೇಸರವಾಗಿತ್ತು. ಆದ್ದರಿಂದ ಕ್ಷೇತ್ರದ ಕಡೆ ಬಂದಿರಲಿಲ್ಲ. ರಾಜಕೀಯದಲ್ಲಿ ಮುನಿಸು ಶಾಶ್ವತವಾಗಿ ಇರುವುದಿಲ್ಲ ಎಂದರು.

Share This Article
Leave a comment