ಬೆಂಗಳೂರು:
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 8 ಮಂದಿ ಸಚಿವರು ಕೂಡ ಪ್ರಮಾಣವಚನ ಸ್ವೀಕಾರ ಮಾಡಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.
ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಡಿಕೆಶಿಯವರು ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ದೇಶದ ಹಲವು ರಾಜ್ಯಗಳು ಮುಖ್ಯಮಂತ್ರಿಗಳು, ಹಲವು ಗಣ್ಯರು ಭಾಗಿಯಾಗಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ನಟ ಕಮಲ್ ಹಾಸನ್, ಶಿವರಾಜ್ ಕುಮಾರ್, ದುನಿಯಾ ವಿಜಯ್, ನಟಿ ರಮ್ಯಾ, ಉಮಾಶ್ರೀ, ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು.
8 ಮಂದಿ ನೂತನ ಸಚಿವರ ಪಟ್ಟಿ
ಡಾ.ಜಿ.ಪರಮೇಶ್ವರ್
ಕೆ.ಹೆಚ್. ಮುನಿಯಪ್ಪ
ಕೆ.ಜೆ. ಜಾರ್ಜ್
ಎಂ.ಬಿ.ಪಾಟೀಲ್
ಸತೀಶ್ ಜಾರಕಿಹೊಳಿ
ಪ್ರಿಯಾಂಕ್ ಖರ್ಗೆ
ರಾಮಲಿಂಗ ರೆಡ್ಡಿ
ಜಮೀರ್ ಅಹ್ಮದ್ ಖಾನ್
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು