December 27, 2024

Newsnap Kannada

The World at your finger tips!

sidhu ravath

ಸಿಧು ನೇತೃತ್ವದಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆ: ರಾವತ್

Spread the love

ಮುಂಬರುವ ಪಂಜಾಬ್ ವಿಧಾನ ಸಭಾ ಚುನಾವಣೆಯನ್ನು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ನಾಯಕತ್ವದಲ್ಲೇ ನಡೆಸುವುದಾಗಿ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಹೇಳಿದರು.


ಆದರೂ ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ನಿರ್ಧಾರ ಕೈಗೊಳ್ಳುವರು ಎಂದು ಅವರು ಚಂಡೀಗಢದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಈಗ ಸಿಧು ಒಬ್ಬ ಜನಪ್ರಿಯ ನಾಯಕ. ಆದ್ದರಿಂದ ಅವರ ನೇತೃತ್ವದಲ್ಲೇ 2022 ರ ಪಂಜಾಬ್ ಚುನಾವಣೆಯನ್ನು ಎದುರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.


ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಒಮ್ಮತದಿಂದ ಮುಖ್ಯಮಂತ್ರಿಯಾಗಿ ಆಯ್ಕೆಮಾಡಲಾಗಿದೆ. ಇದೇನೂ ಪೂರ್ವ ನಿಯೋಜಿತವಲ್ಲ ಎಂದು ತಿಳಿಸಿದರು. ಕ್ಯಾಪ್ಟನ್ ಅಮರೀಂದರ್ ಸಿಂಗ್ ಕಳೆದ ಶನಿವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Copyright © All rights reserved Newsnap | Newsever by AF themes.
error: Content is protected !!