ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೇಮಕಗೊಂಡಿದ್ದ ನವಜೋತ್ ಸಿಂಗ್ ಸಿಧು ಇದೀಗ ದಿಢೀರ್ ರಾಜೀನಾಮೆ ನೀಡಿದ್ದಾರೆ.
ನವಜೋತ್ ಸಿಂಗ್ ಸಿಧುರನ್ನ ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರ ವಿಚಾರವಾಗಿ ಮಾಜಿ ಹಿಂದಿನ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ಗೆ ಅಸಮಾಧಾನವಿತ್ತು.
ನಂತರದ ಬೆಳವಣಿಗೆಯಲ್ಲಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕಾಂಗ್ರೆಸ್ ಹೈಕಮಾಂಡ್ ಚರಣ್ಜಿತ್ ಸಿಂಗ್ ಚನ್ನಿಯವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿತು.
ಈ ಬೆನ್ನಲ್ಲೇ ಇದೀಗ ಪಂಜಾಬ್ ಸರ್ಕಾರದ ಸಚಿವ ಸಂಪುಟ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಇನ್ನೊಂದೆಡೆ ಅಮರೀಂದರ್ ಸಿಂಗ್ ದೆಹಲಿ ನಾಯಕರನ್ನ ಭೇಟಿಯಾಗಲು ದೆಹಲಿಗೆ ತೆರಳಿದ್ದಾರೆ.
ಈ ಮಧ್ಯೆಯೇ ನವಜೋತ್ ಸಿಂಗ್ ಸಿಧು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ.
ಆ ಮನುಷ್ಯ ಪೀಟ್ ಅಲ್ಲ – ಕ್ಯಾಪ್ಟನ್
ನವಜೋತ್ ಸಿಂಗ್ ಸಿಧು ರಾಜೀನಾಮೆಯ ಹಿಂದಿನ ಕಾರಣವೇನು ಎಂಬ ಲೆಕ್ಕಾಚಾರಗಳು ರಾಜಕೀಯ ವಲಯದಲ್ಲಿ ಶುರುವಾಗಿವೆ. ಈ ಮಧ್ಯೆ ಪಂಜಾಬ್ ಮಾಜಿ ಸಿಎಂ ಅಮರೀಂದರ್ ಕ್ಯಾಪ್ಟನ್ ನವಜೋತ್ ಸಿಂಗ್ ಸಿಧು ರಾಜೀನಾಮೆಗೆ ಪ್ರತಿಕ್ರಿಯೆ ನೀಡಿ
‘ಆ ಮನುಷ್ಯ ಗಡಿ ರಾಜ್ಯಕ್ಕೆ ಫಿಟ್ ಅಲ್ಲ’ ಅಂತ ಮೊದಲೇ ಹೇಳಿದ್ದೆ ಎಂದ ಕ್ಯಾಪ್ಟನ್ ಟ್ವಿಟ್ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ