Main News

ಪಂಜಾಬ್ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ –

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೇಮಕಗೊಂಡಿದ್ದ ನವಜೋತ್ ಸಿಂಗ್ ಸಿಧು ಇದೀಗ ದಿಢೀರ್ ರಾಜೀನಾಮೆ ನೀಡಿದ್ದಾರೆ.

ನವಜೋತ್ ಸಿಂಗ್ ಸಿಧುರನ್ನ ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರ ವಿಚಾರವಾಗಿ ಮಾಜಿ ಹಿಂದಿನ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್​ಗೆ ಅಸಮಾಧಾನವಿತ್ತು.

ನಂತರದ ಬೆಳವಣಿಗೆಯಲ್ಲಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕಾಂಗ್ರೆಸ್ ಹೈಕಮಾಂಡ್ ಚರಣ್​ಜಿತ್ ಸಿಂಗ್ ಚನ್ನಿಯವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿತು.

ಈ ಬೆನ್ನಲ್ಲೇ ಇದೀಗ ಪಂಜಾಬ್ ಸರ್ಕಾರದ ಸಚಿವ ಸಂಪುಟ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಇನ್ನೊಂದೆಡೆ ಅಮರೀಂದರ್ ಸಿಂಗ್ ದೆಹಲಿ ನಾಯಕರನ್ನ ಭೇಟಿಯಾಗಲು ದೆಹಲಿಗೆ ತೆರಳಿದ್ದಾರೆ.

ಈ ಮಧ್ಯೆಯೇ ನವಜೋತ್ ಸಿಂಗ್ ಸಿಧು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ.

ಆ ಮನುಷ್ಯ ಪೀಟ್ ಅಲ್ಲ – ಕ್ಯಾಪ್ಟನ್‌

ನವಜೋತ್ ಸಿಂಗ್ ಸಿಧು ರಾಜೀನಾಮೆಯ ಹಿಂದಿನ ಕಾರಣವೇನು ಎಂಬ ಲೆಕ್ಕಾಚಾರಗಳು ರಾಜಕೀಯ ವಲಯದಲ್ಲಿ ಶುರುವಾಗಿವೆ. ಈ ಮಧ್ಯೆ ಪಂಜಾಬ್ ಮಾಜಿ ಸಿಎಂ ಅಮರೀಂದರ್ ಕ್ಯಾಪ್ಟನ್ ನವಜೋತ್ ಸಿಂಗ್ ಸಿಧು ರಾಜೀನಾಮೆಗೆ ಪ್ರತಿಕ್ರಿಯೆ ನೀಡಿ
‘ಆ ಮನುಷ್ಯ ಗಡಿ ರಾಜ್ಯಕ್ಕೆ ಫಿಟ್ ಅಲ್ಲ’ ಅಂತ ಮೊದಲೇ ಹೇಳಿದ್ದೆ ಎಂದ ಕ್ಯಾಪ್ಟನ್ ಟ್ವಿಟ್ ಮಾಡಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024