ಬೆಂಗಳೂರು : ಬಿಜೆಪಿ ನಾಯಕರು ,ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಬೆಂಗಳೂರಿನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಮಾಜಿ ಸಚಿವ ಅರಗ ಜ್ಞಾನೇಂದ್ರ, ಶಾಸಕ ಅರವಿಂದ್ ಬೆಲ್ಲದ್ ಹಾಗೂ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ.
“ಮುಡಾದಲ್ಲಿ ಭಾರೀ ಹಗರಣ ನಡೆದಿದೆ. ಒಬ್ಬೊಬ್ಬರಿಗೆ 15 ಸೈಟ್ ಗಳನ್ನು ಹಂಚಿದ್ದಾರೆ. ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ. ಮಂಡ್ಯದಲ್ಲಿ ನಡೆದಿದ್ದ ನಿವೇಶನ ಹಂಚಿಕೆ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸಿದಂತೆ ಮುಡಾ ಅಕ್ರಮ ಕೇಸ್ ನ್ನು ಸಿಬಿಐಗೆ ಒಪ್ಪಿಸಬೇಕು ” ಎಂದು ಆರ್.ಅಶೋಕ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ನಿಗಮದಲ್ಲಿ ಅಕ್ರಮ, ಮುಡಾ ಅಕ್ರಮ ಸೇರಿದಂತೆ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕುವ ಮೂಲಕ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.25 IPS ಅಧಿಕಾರಿಗಳ ವರ್ಗಾವಣೆ. ಮೈಸೂರು, ಮಂಡ್ಯ ಎಸ್ಪಿ ಬದಲಾವಣೆ
ಬಿಜೆಪಿ ನಾಯಕರು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು ,ತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಆರ್.ಅಶೋಕ್, ಮಾಜಿ ಸಚಿವ ಅರಗ ಜ್ಞಾನೇಂದ್ರ, ಶಾಸಕ ಅರವಿಂದ ಬೆಲ್ಲದ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದಿದ್ದಾರೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ