CM ನಿವಾಸಕ್ಕೆ ಮುತ್ತಿಗೆ : ಡಿಕೆಶಿ, ಸಿದ್ದರಾಮಯ್ಯ, ಸುರ್ಜೇವಾಲಾ ವಿರುದ್ಧ ಎಫ್‍ಐಆರ್

Team Newsnap
1 Min Read
Siddaramaiah was shocked to see the internal survey report of Kolar ಕೋಲಾರದ ಆಂತರಿಕ ಸಮೀಕ್ಷಾ ವರದಿ ಕಂಡು ಗರಬಡಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಹೈಗ್ರೌಂಡ್ಸ್ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಏಪ್ರಿಲ್ 14 ರಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು.

ಈ ವೇಳೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಒಟ್ಟು 36 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಅನುಮತಿ ಇಲ್ಲದೆ, ಅಕ್ರಮ ಕೂಟ ಸೇರಿ, ಸಂಚಾರಕ್ಕೆ ಅಡ್ಡಪಡಿಸಿದ್ದ ಕಾಂಗ್ರೆಸ್ ನಾಯಕರು ರೇಸ್ ಕೋರ್ಸ್ ರಸ್ತೆಯ ರೇಸ್ ವ್ಯೂ ಹೋಟೆಲ್ ಬಳಿ ಪ್ರತಿಭಟನೆ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಹೈ ಗ್ರೌಂಡ್ಸ್ ಠಾಣೆಯಲ್ಲಿ ಐಪಿಸಿ 143, 341 ಅಡಿಯಲ್ಲಿ ಎಫ್‍ಐಆರ್ ದಾಖಲು ಮಾಡಿದ್ದಾರೆ.

Share This Article
Leave a comment