November 22, 2024

Newsnap Kannada

The World at your finger tips!

gowramma and rohini

ಮಗನ ಸಾವಿಗೆ ಸಿಂಧೂರಿ ಹೊಣೆಯಲ್ಲ: ಅವರಿಬ್ಬರೂ ಮದುವೆ ಆಗಬಹುದಿತ್ತು ಎಂದ ಡಿ.ಕೆ.ರವಿ ತಾಯಿ

Spread the love

ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ‌ಇಬ್ಬರು ಮಹಿಳಾ ಅಧಿಕಾರಿಗಳ ಕಿತ್ತಾಟದಲ್ಲಿ ನನ್ನ ಮಗನ ಹೆಸರು ತರಬೇಡಿ. ನನ್ನ ಮಗ ಮೃತಪಟ್ಟು 8 ವರ್ಷಗಳು ಕಳೆದಿವೆ. ನಿಮ್ಮ ಜಗಳದಿಂದ ನನ್ನ ಮಗನ ಹೆಸರಿಗೆ ಮಸಿ ಹಚ್ಚಬೇಡಿ ಎಂದು ಐಎಎಸ್‌ ಅಧಿಕಾರಿ ದಿ. ಡಿ.ಕೆ.ರವಿ ತಾಯಿ ಗೌರಮ್ಮ ಕಿಡಿಕಾರಿದರು.

ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಲ ಗ್ರಾಮದಲ್ಲಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ತಾಯಿ ಗೌರಮ್ಮ ಮಾಧ್ಯಮಗಳೊಂದಿಗೆ ಮಾತನಾಡಿದರು. ಇದನ್ನು ಓದು – ಮದ್ದೂರಿನ ಗೆಜ್ಜಲಗೆರೆ ಬಳಿ ಲಾರಿಗೆ ಕಾರು ಡಿಕ್ಕಿ – ಇಬ್ಬರು ಯುವಕರ ಸಾವು

ಸಾಮಾಜಿಕ ಜಾಲತಾಣದಲ್ಲಿ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ , ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕೆಲ ಪೋಟೋಗಳನ್ನು ಪೋಸ್ಟ್ ಮಾಡಿದಲ್ಲದೇ ದಿ.ಡಿ.ಕೆ.ರವಿ ಹೆಸರು ಪ್ರಸ್ತಾಪ ಮಾಡಿರುವುದಕ್ಕೆ ಕಿಡಿಕಾರಿದರು.

ಮಗನ ಸಾವಿಗೆ ರೋಹಿಣಿ ಸಿಂಧೂರಿ ಹೊಣೆಯಲ್ಲ

“ನನ್ನ ಮಗ ಡಿ.ಕೆ. ರವಿ ಸಾವಿಗೆ ರೋಹಿಣಿ ಸಿಂಧೂರಿ ಹೊಣೆಯಲ್ಲ. ಅವರಿಬ್ಬರು ಸ್ನೇಹಿತರು,‌ ಅವರು ವ್ಯಾಸಂಗ ಮಾಡುತ್ತಿದ್ದ ಸಮಯದಲ್ಲೂ ಸ್ನೇಹಿತರಾಗಿದ್ದರು. ಆಗಾಗ ನನಗೂ ಫೋನ್ ಮಾಡಿ ಮಾತನಾಡುತ್ತಿದ್ದರು. ಅವರು ಇಷ್ಟಪಟ್ಟಿದ್ದರೆ “ಆ” ಸಮಯದಲ್ಲೇ ಇಬ್ಬರು ಮದುವೆ ಅಗಬಹುದಿತ್ತು.‌ ಅದಕ್ಕೆ ಯಾರ ವಿರೋಧವೂ ಇರಲಿಲ್ಲ. ಹಾಗಾಗಿ ಅವರ ಮೇಲೆ ಎನೂ ಹೇಳುವುದಿಲ್ಲ‌,” ಎಂದು ಡಿ.ಕೆ.ರವಿ ತಾಯಿ ಗೌರಮ್ಮ‌ ತಿಳಿಸಿದರು. ಇದನ್ನು ಓದು – ರೂಪ ವಿರುದ್ಧ ಕೇಸು ದಾಖಲಿಸಲು ನಿರ್ಧಾರ – ಸಿಂಧೂರಿ: ಆಕೆಯ ಕರ್ಮಗಳು ಬಿಡುವುದಿಲ್ಲ – ಕುಸುಮಾ

ನಮ್ಮ ಮನೆಗೆ ರೋಹಿಣಿ ಸಿಂಧೂರಿ ಮೂರು ಬಾರಿ ಬಂದಿದ್ದಾರೆ. ಡಿ.ಕೆ. ರವಿಯ ಸಾಮಾಜಿಕ ಕಳಕಳಿ ಕಂಡು ನನಗೂ ಮಾರ್ಗದರ್ಶನ ಮಾಡು ಎಂದು ರೋಹಿಣಿ ನನ್ನ ಮುಂದೆಯೇ ಕೇಳಿದ್ದಾಳೆ. ರೋಹಿಣಿ ಸಿಂಧೂರಿ ಮೇಲೆ ಅಪರಾಧ ಹೊರಿಸಲು ರೂಪ‌ ಅವರು ನನ್ನ ಮಗನ ಹೆಸರನ್ನು ತಂದಿದ್ದಾರೆ. ನಿಮ್ಮಿಬ್ಬರ ಜಗಳದಲ್ಲಿ ನನ್ನ ಮಗನ ಹೆಸರು ತರಬೇಡಿ, ನೀವೆ ಆಗಲಿ, ರಾಜಕಾರಣಿಗಳೇ ಅಗಲಿ ಯಾವುದೆ ವಿಚಾರಕ್ಕೆ ನನ್ನ ಮಗನ ಹೆಸರು ತರಬೇಡಿ,” ಎಂದು ಗೌರಮ್ಮ ಎಚ್ಚರಿಕೆ ನೀಡಿದರು.

Copyright © All rights reserved Newsnap | Newsever by AF themes.
error: Content is protected !!