ಸಿಂಧೂರಿ ವರ್ಗಾವಣೆ ವಿವಾದ : ಹೈಕೋರ್ಟ್ ಮೆಟ್ಟಿಲೇರಿದ ಅಧಿಕಾರಿ ಬಿ ಶರತ್

Team Newsnap
1 Min Read

ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ತಮ್ಮನ್ನು ಅವಧಿಪೂರ್ವ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಐಎಎಸ್ ಅಧಿಕಾರಿ ಬಿ. ಶರತ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇದೇ ವೇಳೆ, ಸಿಎಟಿ ನೀಡಿರುವ ಆದೇಶ ಪ್ರಶ್ನಿಸಿ ಸರ್ಕಾರವೂ ಕೂಡ ಹೈಕೋರ್ಟ್​​​ಗೆ ಅರ್ಜಿ ಸಲ್ಲಿಸಿದೆ.

ವರ್ಗಾವಣೆ ಪ್ರಶ್ನಿಸಿ ಐಎಎಸ್ ಅಧಿಕಾರಿ ಬಿ. ಶರತ್ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಸರ್ಕಾರದ ಪರ ವಕೀಲರು ಪೀಠಕ್ಕೆ ಹಿರಿಯ ಅಧಿಕಾರಿಗಳೆಲ್ಲರೂ ಕೋವಿಡ್ ನಿಯಂತ್ರಣ ಕಾರ್ಯಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ ಅರ್ಜಿಗೆ ಪ್ರತಿಕ್ರಿಯಿಸಲು ಹೆಚ್ಚಿನ ಕಾಲಾವಕಾಶ ಬೇಕಿದೆ. ಆದ್ದರಿಂದ ಪ್ರಕರಣದ ವಿಚಾರಣೆಯನ್ನು ಮುಂದೂಡಬೇಕು ಎಂದು ಕೋರಿದರು.

ಹೆಚ್ಚಿನ ಕಾಲಾವಕಾಶ ನೀಡಲು ಒಪ್ಪದ ಪೀಠ, ವಿಚಾರಣೆಯನ್ನು ಜೂನ್ 7ಕ್ಕೆ ಮುಂದೂಡಿ ಅಷ್ಟರಲ್ಲಿ ಸರ್ಕಾರ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿತು.

ರಾಜ್ಯ ಸರ್ಕಾರ ರೋಹಿಣಿ ಸಿಂಧೂರಿ ಅವರನ್ನು ಮೈಸೂರು ಡಿಸಿ ಹುದ್ದೆಗೆ ನಿಯೋಜಿಸಿಲು ಬಿ. ಶರತ್ ಅವರನ್ನು ವರ್ಗಾವಣೆ ಮಾಡಿತ್ತು. 2020ರ ಆಗಸ್ಟ್ ನಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಬಿ. ಶರತ್ ಅವರನ್ನು ಒಂದು ತಿಂಗಳ ಅವಧಿಗೆ ಮೊದಲೇ ಸೆಪ್ಟೆಂಬರ್ ತಿಂಗಳಲ್ಲಿ ವರ್ಗಾವಣೆ ಮಾಡಿತ್ತು. ಸರ್ಕಾರದ ಈ ಕ್ರಮ ಪ್ರಶ್ನಿಸಿ ಬಿ. ಶರತ್ ಕೇಂದ್ರ ಆಡಳಿತಾತ್ಮಕ ನ್ಯಾಯಾಧಿಕರಣಕ್ಕೆ(ಸಿಎಟಿ) ಅರ್ಜಿ ಸಲ್ಲಿಸಿದ್ದರು.ಅರ್ಜಿ ವಿಚಾರಣೆ ನಡೆಸಿದ್ದ ಸಿಎಟಿ ತೀರ್ಪು ಪ್ರಕಟಿಸಲು ವಿಳಂಬ ಮಾಡಿತ್ತು.

Share This Article
Leave a comment