ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನ ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ ಭಾರತದ ಸ್ಟಾರ್ ಶಟ್ಲರ್ ಪಿವಿ ಸಿಂದು ಅಮೋಘ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.ಇದನ್ನು ಓದಿ –ಮಡಿಕೇರಿ – ಮಂಗಳೂರು: ರಸ್ತೆ ಸಂಚಾರ ಬಂದ್ – ಸಂಚಾರಕ್ಕೆ ಪರ್ಯಾಯ ರಸ್ತೆ
ಚೀನಾದ ವಾಂಗ್ ಝಿ ಯಿ ವಿರುದ್ದ ನಡೆದ ಫೈನಲ್ ಪಂದ್ಯದಲ್ಲಿ ಭಾರತೀಯ ತಾರೆ ಭರ್ಜರಿ ಪ್ರದರ್ಶನ ನೀಡಿದ್ದರು. ಆರಂಭದಿಂದಲೇ ವಾಂಗ್ ವಿರುದ್ದ ಮೇಲುಗೈ ಸಾಧಿಸಿದ್ದ ಸಿಂಧು, ಮೊದಲ ಸೆಟ್ ಅನ್ನು 21-9 ಅಂತರದಿಂದ ಗೆದ್ದುಕೊಂಡರು. ಇದಾಗ್ಯೂ 2ನೇ ಸೆಟ್ನಲ್ಲಿ ವಾಂಗ್ ಝಿ ಯಿ ಕಂಬ್ಯಾಕ್ ಮಾಡಿದ್ದರು. ದ್ವಿತೀಯ ಸೆಟ್ನ ಆರಂಭದಲ್ಲೇ ಅತ್ಯುತ್ತಮ ಸ್ಮ್ಯಾಶ್ ಮೂಲಕ 6 ಪಾಯಿಂಟ್ ಕಲೆಹಾಕಿ ಒತ್ತಡಕ್ಕೆ ಸಿಲುಕಿಸಿದ್ದರು. ಪರಿಣಾಮ ಎರಡನೇ ಸೆಟ್ ಅನ್ನು ಪಿವಿ ಸಿಂಧು 11-21 ಅಂತರದಿಂದ ಸೋತರು.
ಪಂದ್ಯದ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದ ಸಿಂಧು ಮತ್ತೊಮ್ಮೆ ತಮ್ಮ ಬ್ಯಾಕ್ ಜಂಪ್ ಸ್ಯಾಶ್ ಮೂಲಕ ವಾಂಗ್ ಝಿ ವಿರುದ್ದ ಮೇಲುಗೈ ಹೊಂದಿದರು. ಅಂತಿಮವಾಗಿ 21-15 ರ ಅಂತರದಿಂದ ಗೆಲ್ಲುವ ಮೂಲಕ ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ