ಸಿಂಗಾಪುರ ಓಪನ್‌ ಬ್ಯಾಡ್ಮಿಂಟನ್: ಚಾಂಪಿಯನ್ ಪಟ್ಟಕ್ಕೆ ಏರಿದ ಪಿವಿ ಸಿಂಧು

Team Newsnap
1 Min Read
Singapore Open Badminton: PV Sindhu became champion ಸಿಂಗಾಪುರ ಓಪನ್‌ ಬ್ಯಾಡ್ಮಿಂಟನ್: ಚಾಂಪಿಯನ್ ಪಟ್ಟಕ್ಕೆ ಏರಿದ ಪಿವಿ ಸಿಂಧು #Thenewsnap #latestnews #Singapore_open #P_V_Sindu #Badtminton #Sports #International #India #kannadanews #Mandya #bengaluru #Mysuru

ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆಯಾಗಿರುವ ಸಿಂಧು ಈ ವರ್ಷ ಸೈಯದ್ ಮೋದಿ ಇಂಟರ್‌ನ್ಯಾಶನಲ್ ಮತ್ತು ಸ್ವಿಸ್ ಓಪನ್‌ನಲ್ಲಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

WhatsApp Image 2022 07 17 at 12.08.22 PM

ಸಿಂಗಾಪುರ ಓಪನ್‌ ಬ್ಯಾಡ್ಮಿಂಟನ್ ಚಾಂಪಿಯನ್​ಶಿಪ್​ನ ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ ಭಾರತದ ಸ್ಟಾರ್ ಶಟ್ಲರ್ ಪಿವಿ ಸಿಂದು ಅಮೋಘ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.ಇದನ್ನು ಓದಿ –ಮಡಿಕೇರಿ – ಮಂಗಳೂರು: ರಸ್ತೆ ಸಂಚಾರ ಬಂದ್‌ – ಸಂಚಾರಕ್ಕೆ ಪರ್ಯಾಯ ರಸ್ತೆ

ಚೀನಾದ ವಾಂಗ್ ಝಿ ಯಿ ವಿರುದ್ದ ನಡೆದ ಫೈನಲ್​ ಪಂದ್ಯದಲ್ಲಿ ಭಾರತೀಯ ತಾರೆ ಭರ್ಜರಿ ಪ್ರದರ್ಶನ ನೀಡಿದ್ದರು. ಆರಂಭದಿಂದಲೇ ವಾಂಗ್ ವಿರುದ್ದ ಮೇಲುಗೈ ಸಾಧಿಸಿದ್ದ ಸಿಂಧು, ಮೊದಲ ಸೆಟ್​ ಅನ್ನು 21-9 ಅಂತರದಿಂದ ಗೆದ್ದುಕೊಂಡರು. ಇದಾಗ್ಯೂ 2ನೇ ಸೆಟ್​ನಲ್ಲಿ ವಾಂಗ್ ಝಿ ಯಿ ಕಂಬ್ಯಾಕ್ ಮಾಡಿದ್ದರು. ದ್ವಿತೀಯ ಸೆಟ್​ನ ಆರಂಭದಲ್ಲೇ ಅತ್ಯುತ್ತಮ ಸ್ಮ್ಯಾಶ್ ಮೂಲಕ 6 ಪಾಯಿಂಟ್ ಕಲೆಹಾಕಿ ಒತ್ತಡಕ್ಕೆ ಸಿಲುಕಿಸಿದ್ದರು. ಪರಿಣಾಮ ಎರಡನೇ ಸೆಟ್ ಅನ್ನು ಪಿವಿ ಸಿಂಧು 11-21 ಅಂತರದಿಂದ ಸೋತರು.

ಪಂದ್ಯದ ಮೇಲೆ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದ ಸಿಂಧು ಮತ್ತೊಮ್ಮೆ ತಮ್ಮ ಬ್ಯಾಕ್ ಜಂಪ್ ಸ್ಯಾಶ್​ ಮೂಲಕ ವಾಂಗ್ ಝಿ ವಿರುದ್ದ ಮೇಲುಗೈ ಹೊಂದಿದರು. ಅಂತಿಮವಾಗಿ 21-15 ರ ಅಂತರದಿಂದ ಗೆಲ್ಲುವ ಮೂಲಕ ಸಿಂಗಾಪುರ್ ಓಪನ್​ ಬ್ಯಾಡ್ಮಿಂಟನ್​ ಚಾಂಪಿಯನ್​ಶಿಪ್​ನಲ್ಲಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದರು.

Share This Article
Leave a comment