ಕನ್ನಡ, ಮಲಯಾಳಿ, ತಮಿಳು ಮತ್ತು ತೆಲುಗು ಭಾಷೆಗಳ ಹಲವಾರು ಚಿತ್ರಗಳ ಗಾಯಕಿ ಸಂಗೀತಾ ಸಚಿತ್ (46)ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು.
ಸುಮಾರು 200 ಹಾಡುಗಳನ್ನು ಇವರು ಹಾಡಿದ್ದಾರೆ.ತಮಿಳಿನ ನಾಲೈ ತೀರ್ಪು ಚಿತ್ರದಲ್ಲಿ ಹಾಡುವ ಮೂಲಕ ಸಂಗೀತ ಲೋಕಕ್ಕೆ ಪದಾರ್ಪಣೆ ಮಾಡಿದ್ದ ಸಂಗೀತಾ ಅವರಿಗೆ ಹೆಸರು ತಂದುಕೊಟ್ಟದ್ದು ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಸಂಯೋಜಿಸಿದ ತಮಿಳು ಚಲನಚಿತ್ರ ಮಿಸ್ಟರ್ ರೋಮಿಯೋ. ಈ ಚಿತ್ರದಲ್ಲಿನ ‘ತಣ್ಣೀರೈ ಕತಲಿಕ್ಕುಮ್’ ಹಾಡು ಸೂಪರ್ ಹಿಟ್ ಆಗಿತ್ತು.
ಇದಿಷ್ಟೇ ಅಲ್ಲದೇ ಮಲಯಾಳದ ಕಕ್ಕುಯಿಲ್‌ನ ಅಲಾರೆ ಗೋವಿಂದಾ, ಎನ್ನ್ ಸ್ವಂತಂ ಜಾನಕಿಕುಟ್ಟಿಯ ಅಂಬಿಲಿಪೂವಟ್ಟಂ ಮತ್ತು ಧುಮ್ ಧುಮ್ ಧುಮ್ ಧುರಯಾತೋ ಅವರು ಹಾಡಿರುವ ಜನಪ್ರಿಯ ಹಾಡುಗಳು. ಮಲಯಾಳಂನಲ್ಲಿ ಅವರ ಕೊನೆಯ ಹಾಡು ಕುರುತಿ ಚಿತ್ರದ ಥೀಮ್ ಸಾಂಗ್.
ಸಂಗೀತಾ ಹಾಡಿಗೆ ಮನಸೋತಿದ್ದ ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಕಾರ್ಯಕ್ರಮವೊಂದರಲ್ಲಿ ತಾವು ಧರಿಸಿದ್ದ 10 ಗ್ರಾಂ ಚಿನ್ನದ ಸರವನ್ನು ಗೌರವಾರ್ಥವಾಗಿ ಉಡುಗೊರೆಯಾಗಿ ನೀಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್