Main News

ಜನವರಿ 1 ರಿಂದ ಅಹವಾಲು ಸ್ವೀಕಾರಕ್ಕೆ ಒಂದೇ ಇ-ಮೇಲ್ ಐಡಿ

ಮುಖ್ಯಮಂತ್ರಿ ಕಚೇರಿಗೆ ಅಹವಾಲು ಸಲ್ಲಿಕೆ ಹಾಗೂ ಸಂವಹನಕ್ಕಾಗಿ 2021ರ ಜನವರಿ 1 ರಿಂದ cm.kar@nic.in ಇ-ಮೇಲ್ ಐಡಿಯನ್ನು ಮಾತ್ರ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಚಿವಾಲಯದ ಹೇಳಿದೆ.

ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ 2020ರ ಆಗಸ್ಟ್ ತಿಂಗಳಿನಿಂದ ಇ-ಮೇಲ್ ಮೂಲಕ ಸ್ವೀಕೃತವಾಗುವ ಅಹವಾಲುಗಳನ್ನು ಇ-ಆಫೀಸ್ ನಲ್ಲಿಯೇ ನಿರ್ವಹಿಸಲಾಗುತ್ತಿದೆ.

ಪ್ರಸ್ತುತ ಮುಖ್ಯಮಂತ್ರಿಗಳ ಸಚಿವಾಲಯವು 3 ಸಕ್ರಿಯ ಇ-ಮೇಲ್ ವಿಳಾಸಗಳನ್ನು ಹೊಂದಿದೆ. ಇದರಿಂದ ಅಹವಾಲು ಪುನರಾವರ್ತನೆಯಾಗುತ್ತಿದೆ ಹಾಗೂ ಅನಗತ್ಯ ಗೊಂದಲ ಉಂಟಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಅಹವಾಲು ಸಲ್ಲಿಕೆ ಮತ್ತು ನಿರ್ವಹಣೆಯನ್ನು ಸರಳಗೊಳಿಸಲು ಏಕ ವಿಳಾಸವನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿ, ಮುಂದಿನ ದಿನಗಳಲ್ಲಿ ತಮ್ಮ ಅಹವಾಲು ಮತ್ತು ಇತರ ಸಂವಹನವನ್ನು cm.kar@nic.in ಮೇಲ್ ಐಡಿ ಮೂಲಕವೇ ಮಾಡುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಗಳು ಕೋರಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024