.ಬೆಳಿಗ್ಗೆಯಿಂದ ಸಂಜೆ ತನಕ ಕಿತ್ತಾಟ ನಡೆಸುವ ರಾಜಕೀಯ ನಾಯಕರು ಅನೇಕ ಸಾರಿ ಒಟ್ಟಿಗೆ ಊಟ ಮಾಡ್ತಾರೆ, ಪ್ರಯಾಣಾನೂ ಮಾಡುತ್ತಾರೆ. ಇದರಲ್ಲಿ ತಪ್ಪೇನೂ ಇಲ್ಲ. ವಿಶೇಷ ಏನೂ ಇಲ್ಲ.
ಆದರೆ ಶನಿವಾರ ಬೆಳಗಾವಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ , ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರುಗಳು ಇಂದು ಸಂಜೆ ಒಂದೇ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಮಾಡಿದರು.
ಬಿಜೆಪಿ ರಾಜ್ಯ ಕಾರ‍್ಯಕಾರಿಣಿಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳು ಕಾರ್ಯಕ್ರಮದ ನಂತರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಬಾಗಲಕೋಟೆ ಜಿಲ್ಲೆ ಮಹಗಾಲಿಂಗಪುರದಲ್ಲಿ ಕಾಂಗ್ರೆಸ್ ಪಕ್ಷದಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಿದ್ದು ಅದೇ ವಿಮಾನ ನಿಲ್ದಾಣಕ್ಕೆ ಬಂದರು.
ವಿಮಾನ ನಿಲ್ದಾಣದ ಲಾಂಜ್‌ನಲ್ಲಿ ಇಬ್ಬರು ನಾಯಕರು ಮುಖಾಮುಖಿ ಯಾದರು. ನಗುಮುಖದೊಂದಿಗೆ ಬಿಎಸ್‌ವೈ, ಸಿದ್ದು ಅವರೊಂದಿಗೆ ಉಭಯಕುಶಲೋಪರಿ ನಡೆಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಅಶೋಕ್,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತಿತರರು ಇದ್ದರು.
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ