ರಾಜ್ಯದಲ್ಲಿ ರಂಗೇರಿರುವಂತ ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪ ಚುನಾವಣೆ ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲಾಗಿದೆ. ಇಂದು ಕಾಂಗ್ರೆಸ್ ಸೇರ್ಪಡೆಗೊಂಡಂತಹ ಹನುಮಂತರಾಯಪ್ಪ ಪುತ್ರಿ ಡಿ.ಕೆ.ರವಿ ಪತ್ನಿ ಕುಸುಮಾ ಹೆಸರು ರಾಜರಾಜೇಶ್ವರಿ ನಗರಕ್ಕೆ ಹಾಗೂ ಶಿರಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಟಿಬಿ ಜಯಚಂದ್ರ ಹೆಸರನ್ನು ಅಂತಿಮಗೊಳಿಸಿದೆ. ಈ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.
ಆಗ್ನೇಯ ಪದವೀಧರರ ಕ್ಷೇತ್ರದ ಪರಿಷತ್ ಚುನಾವಣೆಗೂ ಕೈ ಅಭ್ಯರ್ಥಿ ಅಂತಿಮವಾಗಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡ ರಮೇಶ್ ಬಾಬು ಹೆಸರು ಕಳುಹಿಸಲಾಗಿದೆ. ಇನ್ನು ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಹೆಸರು ಅಂತಿಮವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಂದ ಬಿ ಫಾರಂ ಪಡೆದಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪ್ರವೀಣ್ ಕೈ ಅಭ್ಯರ್ಥಿಯಾಗಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು