ಸಾಂಸ್ಕೃತಿಕ ನಗರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ 6 ಜನರು ಗ್ಯಾಂಗ್ ರೇಪ್ ಮಾಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ಚಾಮುಂಡಿ ಬೆಟ್ಟದ ಬಳಿಯೇ ಮಂಗಳವಾರ ರಾತ್ರಿ ನಡೆದ ಈ ಸಾಮೂಹಿಕ ಅತ್ಯಾಚಾರಕ್ಕೆ ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೇ ಒಳಗಾಗಿದ್ದಾಳೆ.
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿನ್ನೆ ರಾತ್ರಿ ಸ್ನೇಹಿತನ ಜೊತೆ ಚಾಮುಂಡಿಬೆಟ್ಟಕ್ಕೆ ವಿದ್ಯಾರ್ಥಿನಿ ತೆರಳಿದ ವೇಳೆ ಗೆಳೆಯನ ಮೇಲೆ ದುಷ್ಕರ್ಮಿಗಳು ಭೀಕರವಾಗಿ ಹಲ್ಲೆ ಮಾಡಿ ನಂತರ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂಬ ಮಾಹಿತಿ ಇದೆ.
ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿದ್ಯಾರ್ಥಿನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು