January 6, 2026

Newsnap Kannada

The World at your finger tips!

teacher, learning, school

ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

Spread the love

ಬೆಂಗಳೂರು: ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್‌ಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸುತ್ತಾ, ಈಗಾಗಲೇ ದಾವಣಗೆರೆ ಮತ್ತು ಚಿಂತಾಮಣಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಈ ಕೋರ್ಸ್‌ಗಳನ್ನು ಪ್ರಾರಂಭಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ದೊರಕಿದೆ ಎಂದು ಸಚಿವರು ಹೇಳಿದರು.

ಈ ಅನುಭವದ ಆಧಾರದ ಮೇಲೆ, ಮುಂದಿನ ಹಂತದಲ್ಲಿ ರಾಜ್ಯದ ಇನ್ನೂ 11 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಈ ಕೋರ್ಸ್‌ಗಳನ್ನು ಅಳವಡಿಸಲಾಗುವುದು. ಪ್ರಾರಂಭಿಕವಾಗಿ 5 ಕಾಲೇಜುಗಳಲ್ಲಿ ಈ ಕಾರ್ಯಕ್ರಮ ಜಾರಿಗೆ ತರಲಾಗುವುದು. ಬಳಿಕ ಹಂತಹಂತವಾಗಿ ಉಳಿದ ಕಾಲೇಜುಗಳಲ್ಲಿಯೂ ಇದನ್ನು ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದೇ ಸಂದರ್ಭ, ಖಾಸಗಿ ಶಿಕ್ಷಣ ಸಂಸ್ಥೆಗಳ ಮಾದರಿಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ತಾಂತ್ರಿಕ ಹಾಗೂ ಕೈಗಾರಿಕಾ ಕೌಶಲ್ಯ ಕಲಿಸಲು ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆಗೆ ವಿಶ್ವ ಬ್ಯಾಂಕ್‌‌ನಿಂದ ಸಾಲ ಪಡೆಯಲಾಗುತ್ತಿದೆ ಎಂದು ಸಚಿವರು ಹೇಳಿದರು.ಇದನ್ನು ಓದಿ –BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

ಇದರೊಂದಿಗೆ, 11 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯ ಕೇಂದ್ರಗಳನ್ನು ಸ್ಥಾಪಿಸಲು ಟೊಯೋಟಾ ಕಂಪನಿಯೊಂದಿಗೆ ಒಡಂಬಡಿಕೆ ಮಾಡಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

error: Content is protected !!