ಮೋದಿ ಪ್ರಧಾನಿಯಾಗಿದ್ದರಿಂದ ನನಗೆ ಪ್ರಶಸ್ತಿ ಬಂತು: ಎಸ್.ಎಲ್ ಭೈರಪ್ಪ

Team Newsnap
1 Min Read

ನರೇಂದ್ರ ಮೋದಿ ಭಾರತದ ಪ್ರಧಾನಿ ಆದ ಕಾರಣವೇ ನನಗೆ ಪದ್ಮಭೂಷಣ ಪ್ರಶಸ್ತಿ ಬಂತು. ಇಲ್ಲದೆ ಇದ್ದರೆ ಬರುತ್ತಿರಲಿಲ್ಲ ಎಂದು ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಹೇಳಿದರು.

ಮೈಸೂರಿನ ಕುವೆಂಪು ನಗರದಲ್ಲಿರುವ ಎಸ್.ಎಲ್. ಭೈರಪ್ಪ ಅವರ ನಿವಾಸದಲ್ಲಿ ಶಾಸಕ ರಾಮದಾಸ್ ಅವರಿಂದ ಸನ್ಮಾನ ಸ್ವೀಕರಿಸಿದ ಬಳಿಕ ಭೈರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ 23 ಡಿವೈಎಸ್ಪಿ- 103 ಎಸಿಪಿ, ಇನ್‌ಸ್ಪೆಕ್ಟರ್ ವರ್ಗಾವಣೆ

ನನ್ನ ಕಾದಂಬರಿಗಳ ಮೂಲ ಭಾರತದ ಸಂಸ್ಕೃತಿ. ಈ ಸಂಸ್ಕೃತಿ ಏಕ ರೂಪದಲ್ಲಿ ಬೆಳೆದಿದೆ. ಗಣರಾಜ್ಯ ಮೊದಲಿಂದಲ್ಲೂ ಇತ್ತು. ಸಂವಿಧಾನದ ಬಹುಭಾಗ ನಮ್ಮ ಮೊದಲಿದಂಲೂ
ಇತ್ತು. ಎಷ್ಟೋ ದೇಶದಲ್ಲಿ ಸ್ವಾತಂತ್ರ್ಯ ಪಡೆದಿದ್ದಾರೆ. ಆದರೆ ಅಲ್ಲಿ ಸ್ವಾತಂತ್ರ್ಯ ಉಳಿದುಕೊಂಡಿಲ್ಲ. ನಮ್ಮಲ್ಲಿ ಸಂವಿಧಾನ ಇದೆ. ಈ ದೇಶವನ್ನು ಕಾಪಾಡುತ್ತದೆ ಎಂದರು. ಸಿದ್ದು ಕೋಲಾರದಲ್ಲಿ ಗೆಲ್ಲುವುದಿಲ್ಲ – ಖೆಡ್ಡಾಗೆ ಬಿದ್ದಿದ್ದಾರೆ: ಸಚಿವ ಸುಧಾಕರ್‌

ಗಣರಾಜ್ಯದ ಉತ್ಸವ ಬಹಳ ಮಹತ್ತರವಾದದ್ದು. ಇಲ್ಲೇ ಕೂತಿದ್ದೇನೆ. ಇಲ್ಲೇ ಬರೆದಿದ್ದಾನೆ. ಮೋದಿ ಅವರು ಪ್ರಧಾನಿ ಆದ ಕಾರಣವೇ ನನಗೆ ಈ ಪ್ರಶಸ್ತಿ ಬಂತು. ಇಲ್ಲದೆ ಇದ್ದರೆ ಬರುತ್ತಿರಲಿಲ್ಲ. ಲೇಖಕ ಸತ್ತೇ ಸಾಯುತ್ತಾನೆ. ಆದರೆ ಅವನ ಬರೆದ ಪುಸ್ತಕ ಎಷ್ಟು ದಿನ ಪ್ರಸ್ತುತ ಇರುತ್ತದೋ ಅಲ್ಲಿಯವರೆಗೆ ಲೇಖಕ ಸದಾ ಜೀವಂತ. ನನ್ನ ಕೃತಿಗಳಿಗೆ ಅಂತಹ ಶಕ್ತಿ ಇದ್ದರೆ ನನಗೆ ಸಂತೋಷ ಎಂದು ತಿಳಿಸಿದರು.

Share This Article
Leave a comment