ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ತಮ್ಮನ್ನು ಆಹ್ವಾನಿಸಿದ್ದಕ್ಕೆ
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟಕ್ಕೆ ಪತ್ರದ ಮೂಲಕ ಧನ್ಯವಾದ ಹೇಳಿದ್ದಾರೆ.
ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ನಿನ್ನೆ (ಸೆ. 28) ತಮ್ಮ ಆಹ್ವಾನ ಕುರಿತಂತೆ
ಅಧಿಕೃತ ಆದೇಶ ಹೊರಡಿಸಿರುವ ಈ ಸಂಭ್ರಮದ ವಿಚಾರಕ್ಕೆ ಎಸ್.ಎಂ. ಕೃಷ್ಣ ಬಸವರಾಜ ಬೊಮ್ಮಾಯಿ, ಮಂತ್ರಿಮಂಡಲಕ್ಕೆ ಧನ್ಯವಾದಗಳನ್ನು ತಿಳಿಸಿ, ಹಾಗೂ ನಾಡಿಗೆ ಒಳಿತಾಗಲಿ ಎಂದು ಶುಭಕೋರಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರ ದೃಷ್ಟಿಯಿಂದ ಪ್ರತಿಷ್ಠಾನಗೊಂಡ ರೈತಾಪಿ ವರ್ಗವೆ ಅಧಿಕವಾಗಿರುವ ಮಂಡ್ಯ ಜಿಲ್ಲೆಯಿಂದ ಬಂದ ನಾನು ಈ ಬಾರಿ ದಸರಾ ಉದ್ಘಾಟಿಸುತ್ತಿರುವುದು ನನ್ನ ಬಾಳಿನ ಸುದೈವ. ತಾಯಿ ಚಾಮುಂಡೇಶ್ವರಿ ಮನುಕುಲಕ್ಕೆ ಬಂದಿರುವ ಕೊರೊನಾ ಮಹಾಮಾರಿಯಿಂದ ಮುಕ್ತಿಗೊಳಿಸಿ ನಾಡು ತಮ್ಮ ನೇತೃತ್ವದಲ್ಲಿ ಮತ್ತೆ ಅಭಿವೃದ್ಧಿಯೆಡೆಗೆ ಮುನ್ನಡೆಯಲಿ ಎಂದು ಆಶಿಸುತ್ತೇನೆ ಎಂದು ಶುಭಹಾರೈಸಿದ್ದಾರೆ
ಯದುವಂಶದ ಮಹಾರಾಜರುಗಳು ನಾಡಿನ ಸಾಂಸ್ಕೃತಿಕ ಹಿರಿಮೆಯನ್ನು ವಿಶ್ವಕ್ಕೆ ಪಸರಿಸಲು ಆ ಮೂಲಕ ನಾಡಿನ ಹಿರಿಮೆಯನ್ನು ಎತ್ತಿ ಹಿಡಿಯಲು ಪ್ರಾರಂಭಿಸಿದ ದಸರಾ ಸರಿಸುಮಾರು 400 ವರ್ಷಗಳನ್ನು ಕಳೆದರೂ ತನ್ನ ವೈಭವವನ್ನು ಕಳೆದುಕೊಂಡಿಲ್ಲ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ