ಮೈಸೂರು ದಸರಾ ಉದ್ಘಾಟನೆ: ತಮ್ಮ ಆಹ್ವಾನಕ್ಕೆ ಧನ್ಯವಾದ ತಿಳಿಸಿದ ಎಸ್.ಎಂ ಕೃಷ್ಣ

Team Newsnap
1 Min Read
IT raid on SM Krishna's sister's residence ಎಸ್ ಎಂ ಕೃಷ್ಣ ಸಹೋದರಿ ನಿವಾಸದ ಮೇಲೆ ಐಟಿ ರೇಡ್

ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ತಮ್ಮನ್ನು ಆಹ್ವಾನಿಸಿದ್ದಕ್ಕೆ
ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟಕ್ಕೆ ಪತ್ರದ ಮೂಲಕ ಧನ್ಯವಾದ ಹೇಳಿದ್ದಾರೆ.

s m dasara

ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ನಿನ್ನೆ (ಸೆ. 28) ತಮ್ಮ ಆಹ್ವಾನ ಕುರಿತಂತೆ
ಅಧಿಕೃತ ಆದೇಶ ಹೊರಡಿಸಿರುವ ಈ ಸಂಭ್ರಮದ ವಿಚಾರಕ್ಕೆ ಎಸ್​.ಎಂ. ಕೃಷ್ಣ ಬಸವರಾಜ ಬೊಮ್ಮಾಯಿ, ಮಂತ್ರಿಮಂಡಲಕ್ಕೆ ಧನ್ಯವಾದಗಳನ್ನು ತಿಳಿಸಿ, ಹಾಗೂ ನಾಡಿಗೆ ಒಳಿತಾಗಲಿ ಎಂದು ಶುಭಕೋರಿದ್ದಾರೆ. 

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರ ದೃಷ್ಟಿಯಿಂದ ಪ್ರತಿಷ್ಠಾನಗೊಂಡ ರೈತಾಪಿ ವರ್ಗವೆ ಅಧಿಕವಾಗಿರುವ ಮಂಡ್ಯ ಜಿಲ್ಲೆಯಿಂದ ಬಂದ ನಾನು ಈ ಬಾರಿ ದಸರಾ ಉದ್ಘಾಟಿಸುತ್ತಿರುವುದು ನನ್ನ ಬಾಳಿನ ಸುದೈವ. ತಾಯಿ ಚಾಮುಂಡೇಶ್ವರಿ ಮನುಕುಲಕ್ಕೆ ಬಂದಿರುವ ಕೊರೊನಾ ಮಹಾಮಾರಿಯಿಂದ ಮುಕ್ತಿಗೊಳಿಸಿ ನಾಡು ತಮ್ಮ ನೇತೃತ್ವದಲ್ಲಿ ಮತ್ತೆ ಅಭಿವೃದ್ಧಿಯೆಡೆಗೆ ಮುನ್ನಡೆಯಲಿ ಎಂದು ಆಶಿಸುತ್ತೇನೆ ಎಂದು ಶುಭಹಾರೈಸಿದ್ದಾರೆ

ಯದುವಂಶದ ಮಹಾರಾಜರುಗಳು ನಾಡಿನ ಸಾಂಸ್ಕೃತಿಕ ಹಿರಿಮೆಯನ್ನು ವಿಶ್ವಕ್ಕೆ ಪಸರಿಸಲು ಆ ಮೂಲಕ ನಾಡಿನ ಹಿರಿಮೆಯನ್ನು ಎತ್ತಿ ಹಿಡಿಯಲು ಪ್ರಾರಂಭಿಸಿದ ದಸರಾ ಸರಿಸುಮಾರು 400 ವರ್ಷಗಳನ್ನು ಕಳೆದರೂ ತನ್ನ ವೈಭವವನ್ನು ಕಳೆದುಕೊಂಡಿಲ್ಲ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

Share This Article
Leave a comment