ನ್ಯೂಸ್ ಸ್ನ್ಯಾಪ್.
ಬೆಂಗಳೂರು.
ಮೈಸೂರು ಮತ್ತು ಬಳ್ಳಾರಿ ಪಟ್ಟಣಗಳನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರಿಸುವಂತೆ ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತಂತೆ ಕೇಂದ್ರ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದು ರಾಜ್ಯದ ಬಳ್ಳಾರಿ, ಮೈಸೂರು, ಕಲಬುರ್ಗಿ ಹಾಗೂ ವಿಜಯಪುರ ನಗರಗಳನ್ನು ಈ ಯೋಜನಯ ವ್ಯಾಪ್ತಿಗೆ ತಂದು ಸಮಗ್ರವಾಗಿ ಅಭಿವೃದ್ಧಿ ಪಡಿಸುವಂತೆ ಕೋರಿದ್ದಾರೆ.
ಈಗಾಗಲೇ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಡೆದಿರುವ ಕಾಮಗಾರಿಗಳ ತೃಪ್ತಿದಾಯಕವಾಗಿದೆ ಅಥವಾ ಇಲ್ಲ ಎಂಬುದರ ಬಗ್ಗೆ ಚರ್ಚೆಗಿಂತ ಈ ನಗರಗಳಲ್ಲಿನ ಬಾಕಿ ಕಾಮಗಾರಿಗಳು ತ್ವರಿತವಾಗಿ ಪೂರ್ಣಗೊಳ್ಳುವ ಅಗತ್ಯವಿದೆ. ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಹಣದ ಕೊರತೆ ಇಲ್ಲ. ಕೇಂದ್ರ ಸರ್ಕಾರವು ಕಾಲ ಕಾಲಕ್ಕೆ ಅನುದಾನ ಕೊಡುತ್ತಿದೆ. ಈ ವರ್ಷವೂ ಕೂಡ 500 ಕೋಟಿ ರುಗಳನ್ನು ಬಿಡುಗಡೆ ಮಾಡಿದೆ. ಆದರೆ ಕೊರೋನಾ ಕಾರಣದಿಂದಾಗಿ ಕಾಮಗಾರಿಗಳು ಮಂದಗತಿಯಲ್ಲಿ ನಡೆದಿವೆ ಎಂದು ತಿಳಿಸಿದರು.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು