ಹಾವಿನ ವಿಷವನ್ನು ಅಕ್ರಮವಾಗಿ ಸಾಗಾಟ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರು ಗುಂಪನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿ, ಬಂಧಿಸಿದ ಘಟನೆ ಒಡಿಶಾದ ಭುವನೇಶ್ವರದಲ್ಲಿ ಜರುಗಿದೆ.
ಈ ಜಾಲದ 6 ಬಂಧನದ ಜೊತೆಗೆ
1 ಲೀಟರ್ ಹಾವಿನ ವಿಷ ವಶಪಡಿಸಿಕೊಳ್ಳಲಾಗಿದೆ. ಈ ವಿಷವನ್ನು 10 ಲಕ್ಷ ರೂಪಾಯಿಗೆ ಮಾರಾಟ ಮಾಡಲು ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.
ಹಾವಿನ ವಿಷಕ್ಕೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ 1 ಕೋಟಿ ರೂಪಾಯಿ ಬೆಲೆ ಬಾಳುತ್ತದೆ ಎಂದು ಅರಣ್ಯ ಇಲಾಖೆ ಡಿಎಫ್‍ಒ ಅಶೋಕ್ ಮಿಶ್ರಾ ಹೇಳಿದ್ದಾರೆ.
ಬಂಧಿತ ಆರೋಪಿಗಳು 1 ಲೀಟರ್ ಹಾವಿನ ವಿಷವನ್ನು ತೆಗೆಲು 200 ನಾಗರಹಾವುಗಳನ್ನು ಬಳಕೆ ಮಾಡಿದ್ದಾರೆ.
1972ರ ವನ್ಯಜೀನಿ ಸಂರಕ್ಷಣಾ ಕಾಯ್ದೆಯಡಿ ದೂರು ದಾಖಲಿಸಲಾಗಿದ್ದು, ನಾಳೆ ಕೋರ್ಟಿಗೆ ಆರೋಪಿಗಳನ್ನು ಹಾಜರು ಪಡಿಸುತ್ತೇವೆ ಎಂದು ಅಶೋಕ್ ಮಿಶ್ರಾ ಹೇಳಿದ್ದಾರೆ
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ