ಇದರಿಂದ ಅರ್ಜಿದಾರ ಸ್ನೇಹಮಯಿ ಕೃಷ್ಣಗೆ ಹಿನ್ನಡೆಯಾಗಿದ್ದರೂ, ಅವರು ಸುಪ್ರಿಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದರು. ಆದರೆ, ಇದೀಗ ದೊಡ್ಡ ಬೆಳವಣಿಗೆಯಾಗಿ, ಅವರು ಸುಪ್ರಿಂ ಕೋರ್ಟ್ ಮೇಲ್ಮನವಿ ಅರ್ಜಿ ಸಲ್ಲಿಕೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.
ಸ್ನೇಹಮಯಿ ಕೃಷ್ಣ ಅವರ ಹೊಸ ನಿರ್ಧಾರ
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರಿಂ ಕೋರ್ಟ್ ಮೆಲುಕೋರ್ಟಿಗೆ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದ ಸ್ನೇಹಮಯಿ ಕೃಷ್ಣ, ಇದೀಗ ಆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಈ ಕುರಿತು ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಸ್ನೇಹಮಯಿ ಕೃಷ್ಣ ಹೇಳಿದ್ದೇನು?
“ಮುಡಾ ಹಗರಣ ಸಂಬಂಧ ಸುಪ್ರಿಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಹಲವರು ಪ್ರಶ್ನೆ ಮಾಡಿದ್ದರು. ಹೈಕೋರ್ಟ್ ತೀರ್ಪಿನ ಅಂಶಗಳನ್ನು ಪರಿಶೀಲಿಸಿ, ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಪುನಃ ತಯಾರಿಸಿ, ನನ್ನ ವಕೀಲರ ಮತ್ತು ಹಿತೈಷಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ಇದುವರೆಗೆ ನಡೆಸಿದ ಕಾನೂನು ಹೋರಾಟವನ್ನು ಆಧರಿಸಿ, ಸುಪ್ರಿಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸದೆ, ನೇರವಾಗಿ ನ್ಯಾಯಾಲಯದಲ್ಲಿ ಸತ್ಯವನ್ನು ಸಾಬೀತುಪಡಿಸಲು ನಿರ್ಧರಿಸಿದ್ದೇನೆ,” ಎಂದು ಅವರು ಹೇಳಿದ್ದಾರೆ.
“ಸುಪ್ರಿಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸುವುದರಿಂದ ಪ್ರಕ್ರಿಯೆ ಇನ್ನಷ್ಟು ಕಾಲವಿಳಂಬವಾಗಬಹುದು. ಲೋಕಾಯುಕ್ತ ಅಧಿಕಾರಿಗಳು ಸಲ್ಲಿಸುವ ವರದಿ ಯಾವುದಾದರೂ ಇರಲಿ, ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಆಧರಿಸಿ, ನ್ಯಾಯಾಲಯದಲ್ಲಿ ನಾನು ಮಾಡಿರುವ ಆರೋಪಗಳನ್ನು ಸಾಬೀತುಪಡಿಸಿ ಆರೋಪಿತರಿಗೆ ಶಿಕ್ಷೆ ಕೊಡಿಸಬಲ್ಲೆ,” ಎಂದು ಸ್ನೇಹಮಯಿ ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆದಷ್ಟು ಬೇಗ ನ್ಯಾಯ ಒದಗಿಸಲು ನಿರ್ಧಾರ
“ವಕೀಲರ ಸಹಾಯ ಪಡೆಯುತ್ತೇನೆ. ಅಗತ್ಯವಿದ್ದರೆ ವಕೀಲರನ್ನು ನೇಮಕ ಮಾಡಿಕೊಳ್ಳುವ ಹಕ್ಕನ್ನು ಉಳಿಸಿಕೊಂಡು, ನಾನು ಖುದ್ದಾಗಿ ನ್ಯಾಯಾಲಯಕ್ಕೆ ಸಾಕ್ಷ್ಯಾಧಾರಗಳನ್ನು ಒದಗಿಸಿ, ನ್ಯಾಯಮೂರ್ತಿಗಳ ಮುಂದೆ ವಾದ ಮಂಡಿಸುತ್ತೇನೆ. ನಾನು ಮಾಡಿರುವ ಆರೋಪಗಳನ್ನು ಸಾಬೀತುಪಡಿಸಿ, ಶೀಘ್ರವಾಗಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ನಾನೇ ಮುಂದಾಗುತ್ತೇನೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಧಾರವಾಡ ಹೈಕೋರ್ಟ್ ತೀರ್ಪು
ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದ ಹೈಕೋರ್ಟ್, ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆ ಅಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು. ಲೋಕಾಯುಕ್ತ ಪೊಲೀಸರ ತನಿಖೆಯಲ್ಲಿ ತಾರತಮ್ಯ ಇದೆ ಎಂಬುದನ್ನು ಸಾಬೀತುಪಡಿಸುವಂತೆ ಯಾವುದೇ ಆಧಾರಗಳು ಇಲ್ಲ. ಅದು ಸ್ವತಂತ್ರ ತನಿಖಾ ಸಂಸ್ಥೆಯಾಗಿದ್ದು, ಅದರ ತನಿಖೆ ಅಸಮರ್ಪಕ ಎಂದು ಹೇಳಲು ಸಾಧ್ಯವಿಲ್ಲ. ಹೀಗಾಗಿ, ಸಿಬಿಐ ತನಿಖೆಗೆ ನೀಡುವ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಅಭಿಪ್ರಾಯಪಟ್ಟಿದೆ.ಇದನ್ನು ಓದಿ –ಬೆಂಗಳೂರು ಏರೋ ಇಂಡಿಯಾ-2025: ವೈಮಾನಿಕ ಶಕ್ತಿಯ ಭವ್ಯ ಪ್ರದರ್ಶನ
ಈ ತೀರ್ಪಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಹಗರಣದ ಆರೋಪದಿಂದ ಬಹುತೇಕ ಪಾರಾಗಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು