ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಪ್ರಮುಖ ಬದಲಾವಣೆಗಳು ನಡೆಯುತ್ತಿವೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಶ್ರೀರಾಮುಲು ಅವರ ಆರೋಗ್ಯ ಖಾತೆಯನ್ನು ವೈದ್ಯಕೀಯ ಸಚಿವ ಡಾ. ಸುಧಾಕರ್ ಅವರಿಗೆ ನೀಡಲು ತೀರ್ಮಾನಿಸಿದ್ದಾರೆ.
ಕೋವಿಡ್ ಈಗ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ. ಆರೋಗ್ಯ ಇಲಾಖೆಗೂ ಹಾಗೂ ವೈದ್ಯಕೀಯ ಇಲಾಖೆಗೂ ಸರಿಯಾದ ಸಮನ್ವಯತೆ ಕಂಡು ಬರುತ್ತಿಲ್ಲ. ಆದ್ದರಿಂದ ಮುಖ್ಯಮಂತ್ರಿಗಳು, ಕೋವಿಡ್‌ನ್ನು ಸಮರ್ಪಕವಾಗಿ ನಿಯಂತ್ರಿಸುವಿಕೆಯ ದೃಷ್ಠಿಯಿಂದ ಮತ್ತು ಆರೋಗ್ಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಕೆಲಸಗಳು ಸುಗಮವಾಗಿ ಸಾಗಲು ಈ ನಿರ್ಧಾರ ಕೈಗೊಂಡಿದ್ದಾರೆ.
ಹಾಗೆಯೇ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಬಳಿಯಿರುವ ಸಮಾಜ ಕಲ್ಯಾಣ ಖಾತೆಯನ್ನು ಶ್ರೀರಾಮುಲು ಅವರಿಗೆ ವಹಿಸಲಾಗಿದೆ .ಸಂಪುಟ ಪುನರ್‌ರಚನೆಗೂ ಮೊದಲೇ ಕೆಲ ಆಯ್ದ ಬಹುಮುಖ್ಯ ಸಚಿವರ ಖಾತೆ ಬದಲಾವಣೆಗೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ.
ಈ ಖಾತೆಗಳ ಬದಲಾವಣೆಯ ಕುರಿತ ಅಧಿಕೃತ ಆದೇಶ ಸದ್ಯದಲ್ಲೇ ಹೊರಬೀಳಲಿದೆ ಎಂದು ಮುಖ್ಯಮಂತ್ರಿಗಳ ಸಚಿವಾಲಯದಿಂದ ಮಾಹಿತಿ ಬಂದಿದೆ.
More Stories
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ