ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಬೋರಾಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿ, ಟಾಟಾ ನಿಕ್ಸಾನ್ ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ವಿ.ಮನು (36) ಮೃತಪಟ್ಟಿದ್ದಾರೆ.
ಮೃತ ವಿ.ಮನು ಅವರು ಪತ್ರಕರ್ತೆ ಹರವು ಸ್ಪೂರ್ತಿ ಅವರ ಪತಿ ಹಾಗೂ ಕೆ.ಎಂ.ದೊಡ್ಡಿ ನಿವಾಸಿ ವೆಂಕಟೇಶ್ ಅವರ ಪುತ್ರರಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಶನಿವಾರ ಅವರು ಬೆಂಗಳೂರಿನಿಂದ ತಮ್ಮ ಸ್ವಗ್ರಾಮ ಕೆ.ಎಂ.ದೊಡ್ಡಿಗೆ ಟಾಟಾ ನಿಕ್ಸಾನ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಮಳವಳ್ಳಿಯಿಂದ ಮದ್ದೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಕಾರಿಗೆ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ನಡೆದಿದೆ. ಬಸ್‌ನ ಮುಂಭಾಗದ ಚಕ್ರ ಪಂಕ್ಚರ್ ಆಗಿ ನಿಯಂತ್ರಣ ತಪ್ಪಿದ ಕಾರಣ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವಿ.ಮನು ಅವರನ್ನು ತಕ್ಷಣ ಮದ್ದೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅವರು ಕೊನೆಯುಸಿರೆಳೆದರು.ಇದನ್ನು ಓದಿ –ಮಾರ್ಚ್ 22ರ ಕರ್ನಾಟಕ ಬಂದ್ ಮುಂದೂಡುವ ಸಾಧ್ಯತೆ
ಈ ಬಗ್ಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಸಂಬಂಧಿಸಿದಂತೆ ಬಸ್ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು