ಕೆಲವರು ನನಗೆ ಪ್ರಜಾಪ್ರಭುತ್ವದ ಪಾಠ ಆರಂಭಿಸಿದ್ದಾರೆ : ಪ್ರಧಾನಿ ವ್ಯಂಗ್ಯ

Team Newsnap
1 Min Read
Modi to Hubballi on January 12: Preparations for the rush ಜನವರಿ 12ರಂದು ಹುಬ್ಬಳ್ಳಿಗೆಮೋದಿ: ಭರದ ಸಿದ್ಧತೆ

ದೆಹಲಿಯಲ್ಲಿ ಕೆಲವರು ನನಗೆ ಪ್ರಜಾಪ್ರಭುತ್ವದ ಪಾಠ ಹೇಳಿಕೊಡಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ಕಾಂಗ್ರೆಸ್‌ ನಾಯಕರ ಕಾಲೆಳೆದರು.

ಪದುಚೇರಿಯ ಪುರಸಭೆ ಹಾಗೂ ಪಂಚಾಯತ್‌ ಚುನಾವಣೆಗಳ ಕುರಿತಂತೆ ಮಾತನಾಡಿದ ಮೋದಿ, ದಶಕಗಳಿಂದ ಗಡಿ ಪ್ರದೇಶಗಳ ಅಭಿವೃದ್ಧಿಯನ್ನು ಕಡೆಗಣಿಸಿದವರೂ ನನಗೆ ಪ್ರಜಾಪ್ರಭುತ್ವದ ಪಾಠ ಹೇಳಿಕೊಡಲು ಬಂದಿದ್ದಾರೆಂದು.

ಜಮ್ಮು ಕಾಶ್ಮೀರದಲ್ಲಿ ಆಯುಷ್ಮಾನ್‌ ಭಾರತ ಯೋಜನೆಯನ್ನು ಪ್ರಾರಂಭಿಸಿರುವುದನ್ನು ಐತಿಹಾಸಿಕ ಕ್ಷಣವೆಂದು ಹೇಳಿದ ಮೋದಿ, ಜಮ್ಮು ಕಾಶ್ಮೀರದ ಡಿಡಿಸಿ ಚುನಾವಣೆಯಲ್ಲಿ ಅಲ್ಲಿನ ಜನ ಭಾಗವಹಿಸಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ಪುದುಚೇರಿ ಯಲ್ಲಿ ಸುಪ್ರೀಂ ಕೋರ್ಟ್‌ನ ಆದೇಶದ ಹೊರತಾಗಿಯೂ ಪುರಸಭೆ ಮತ್ತು ಪಂಚಾಯತ್ ಚುನಾವಣೆ ನಡೆಯುತ್ತಿಲ್ಲ.‌ ಯಾಕೆ ಸ್ಥಳೀಯ ಸಂಸ್ಥೆ ಯ ಚುನಾವಣೆ ಯನ್ನು ನಡೆಸಲು ಇವರಿಗೆ ಸಾಧ್ಯವಾಗಲಿಲ್ಲ ಯಾಕೆ ಎಂದು ಪ್ರಶ್ನೆ ಮಾಡಿದರು.

ಜಮ್ಮು ಕಾಶ್ಮೀರದ ಡಿಡಿಸಿ ಚುನಾವಣೆಯಲ್ಲಿ ಪಾಲ್ಗೊಂಡ ನಾಗರಿಕರಿಗೆ ಧನ್ಯವಾದ ಹೇಳಿದ ಮೋದಿ, ಜಮ್ಮು ಮತ್ತು ಕಾಶ್ಮೀರದ ಸರ್ವತೋಮುಖ ಅಭಿವೃದ್ಧಿಯನ್ನು ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿದೆ ಎಂದಿದ್ದಾರೆ.

ಕಳೆದ ವರ್ಷ ಆಗಸ್ಟ್‌ನಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ಚುನಾವಣಾ ಪ್ರಕ್ರಿಯೆಯಾಗಿದೆ.

ಜಮ್ಮು ಮತ್ತು ಕಾಶ್ಮೀರದ ಎಲ್ಲಾ ನಿವಾಸಿಗಳಿಗೆ ಆರೋಗ್ಯ ವಿಮೆ ವ್ಯಾಪ್ತಿಯನ್ನು ವಿಸ್ತರಿಸಲು ಪಿಎಂ ಮೋದಿ ಆಯುಷ್ಮಾನ್ ಭಾರತ್ ಯೋಜನೆಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಾರಂಭಿಸಿದರು.

Share This Article
Leave a comment