Categories: Main News

ಹೃದಯದ ವೇದನೆಗೆ ಒಂದಷ್ಟು ಅಕ್ಷರಗಳ ಸಮಾಧಾನ

ಎಡವೂ ಅಲ್ಲ ಬಲವೂ ಅಲ್ಲ ಮಧ್ಯವೂ ಅಲ್ಲ,
ಸತ್ಯದ ಹುಡುಕಾಟದ ಅನಾಥ ನಾ.

ಬಿಜೆಪಿ ಅಲ್ಲ ಕಾಂಗ್ರೆಸ್ ಅಲ್ಲ ಕಮ್ಯುನಿಸ್ಟ್ ಅಲ್ಲ ,
ವಾಸ್ತವದ ಹುಡುಕಾಟದ ಸಾಮಾನ್ಯ ನಾ.

ಹಿಂದೂ ಅಲ್ಲ ಮುಸ್ಲಿಂ ಅಲ್ಲ ಕ್ರಿಶ್ಚಿಯನ್ ಅಲ್ಲ,
ಮಾನವೀಯತೆಯ ಹುಡುಕಾಟದ ಜೀವಿ ನಾ.

ದಲಿತನಲ್ಲ ಬ್ರಾಹ್ಮಣನಲ್ಲ ಗೌಡನಲ್ಲ ಲಿಂಗಾಯಿತನೂ ಅಲ್ಲ, ಸಮಾನತೆಯ ಹುಡುಕಾಟದ ಪ್ರಾಣಿ ನಾ.

ಬಡವನಲ್ಲ ಭಿಕ್ಷುಕನಲ್ಲ ಶ್ರೀಮಂತನಲ್ಲ,
ಹೊಟ್ಟೆ ಪಾಡಿನ ಹುಡುಕಾಟದ ಸಾಮಾನ್ಯ ನಾ.

ಕವಿಯೂ ಅಲ್ಲ ಸಾಹಿತಿಯೂ ಅಲ್ಲ ವಿಮರ್ಶಕನೂ ಅಲ್ಲ,
ಅಕ್ಷರದ ಮುಖಾಂತರ ನಿಮ್ಮ ಹೃದಯ ತಲುಪಲು ಆಸೆಪಡುವ ಸ್ವಾರ್ಥಿ ನಾ.

ಮನಸ್ಸುಗಳ ಅಂತರಂಗದ ಚಳವಳಿ ರೂಪಿಸಿ ಜನರನ್ನು ಪ್ರಬುದ್ದತೆಯೆಡೆಗೆ ಕೊಂಡೊಯ್ದು, ಅವರ ಜೀವನಮಟ್ಟ ಸುಧಾರಿಸಲು ಪ್ರಯತ್ನಿಸುವ ಅಳಿಲು ಯತ್ನ ( ಸೇವೆ ಅಲ್ಲ ) ಮಾಡುವ ಬಯಕೆಯ ಕನಸುಗಾರ ನಾ.

ನಿಮ್ಮ ಹೃದಯಗಳಲ್ಲಿ ಶಾಶ್ವತವಾಗಿ ನೆಲೆಸಲು ಇಚ್ಚಿಸುವ ಹುಚ್ಚ ನಾ.


ಮತ್ತೆ ಮತ್ತೆ ತಲೆ ಎತ್ತಿ ನೋಡುತ್ತೇನೆ ಆಕಾಶದ ಕಡೆಗೆ,

ಈ ಬಾರಿಯಾದರೂ ಹದವಾದ ಮಳೆಯಾಗುವುದೆ,

ಧೋ ಎಂದು ಸುರಿಯದೆ, ತುಂತುರು ಹನಿಯಾಗದೆ ಸಹಜ ಮಳೆಯಾಗುವುದೆ,

ಹಸನಾದ ಭೂಮಿಗೆ ಒಳ್ಳೆಯ ಬಿತ್ತನೆ ಮಾಡಬಹುದೆ,

ಎಲ್ಲರ ಶ್ರಮಕ್ಕೆ ಒಳ್ಳೆಯ ಫಸಲಾಗಬಹುದೆ,

ನಮ್ಮ ಬೆವರಿಗೆ ಉತ್ತಮ ಬೆಲೆ ಸಿಗಬಹುದೆ,

ಆಸೆಯ ಹಗಲುಗನಸಿನಿಂದ ಮನಸ್ಸು ಫಳಫಳ ಹೊಳೆಯುತ್ತದೆ,

ಈ ಸಲವಾದರೂ ನಾನು ಸಾಲಗಳಿಂದ ಮುಕ್ತನಾಗುವೆನೆ,

ಬೆಳೆದ ಮಗಳಿಗೆ ಲಗ್ನ ಮಾಡಲು ಸಾಧ್ಯವಾಗಬಹುದೆ,

ಅಪ್ಪನ ಹೃದಯ ಖಾಯಿಲೆಗೆ ಚಿಕಿತ್ಸೆ ಕೊಡಿಸಬಹುದೆ,

ಅಮ್ಮನ ರೇಷ್ಮೆ ಸೀರೆಯ ಆಸೆ ಪೂರೈಸಬಹುದೆ,

ನನ್ನವಳ ಕನಸಾದ ಕಿವಿಯೋಲೆಯನ್ನು ಅವಳಿಗೆ ಕಾಣಿಕೆಯಾಗಿ ನೀಡಬಹುದೆ,

ಆಮೇಲೆ ಚೂರು ಪಾರು ಉಳಿದರೆ,
ನನ್ನ ಬಾಲ್ಯದ ಚಡ್ಡೀ ದೋಸ್ತುಗಳಿಬ್ಬರ ಜೊತೆ ನಗರಕ್ಕೆ ಹೋಗಿ,‌ಸಿನಿಮಾ ನೋಡಿ, ಮಾದಯ್ಯನ ಹೋಟೆಲ್ ನಲ್ಲಿ,
ನಾಟಿ ಕೋಳಿ ಬಿರ್ಯಾನಿ ತಿನ್ನಬಹುದೆ,

ಕಣ್ಣುಗಳು ಆಸೆಯಿಂದ ಅರಳುತ್ತವೆ,
ಮನಸ್ಸು ವೇದನೆಯಿಂದ ಮುದುಡುತ್ತದೆ,
ನಾಳೆಯ ಬಲ್ಲವರಾರೋ

  • ವಿವೇಕಾನಂದ. ಹೆಚ್.ಕೆ.
Team Newsnap
Leave a Comment
Share
Published by
Team Newsnap

Recent Posts

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024

ಅತಿಶಿ ಮರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ

ನವದೆಹಲಿ: ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ… Read More

September 17, 2024

ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.… Read More

September 17, 2024

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ

ಇಂದು 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ದಾಂಪತ್ಯ… Read More

September 16, 2024