September 27, 2022

Newsnap Kannada

The World at your finger tips!

politics,italy,death

Congress President Sonia Gandhi's mother passed away in Italy ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ಇಟಲಿಯಲ್ಲಿ ನಿಧನ

ಸೋನಿಯಾ ಆಪ್ತ ಕಾರ್ಯದರ್ಶಿ ಮಾಧವನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

Spread the love

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ಪಿ.ಪಿ.ಮಾಧವನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ

ಉದ್ಯೋಗ ಮತ್ತು ಮದುವೆಯ ಭರವಸೆ ನೀಡಿ ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆಯೊಬ್ಬರು ದೂರು ನೀಡಿದ್ದಾಳೆ. ಮಹಿಳೆಯು ದೆಹಲಿಯ ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನು ಓದಿ – ಶಿವಸೇನೆಯ ಬಂಡಾಯ ಶಾಸಕರಿಗೆ ಬಿಗ್ ರಿಲೀಫ್ – ಜುಲೈ 12 ವರೆಗೂ ಅನರ್ಹತೆ ಅಸ್ತ್ರದಿಂದ ಅತೃಪ್ತರು ಸುರಕ್ಷಿತ

ಸಂತ್ರಸ್ತೆ ಮಹಿಳೆಯ ಪತಿ ಕಾಂಗ್ರೆಸ್ ಕಚೇರಿಯಲ್ಲಿ ಹೋರ್ಡಿಂಗ್ ಗಳನ್ನು ಹಾಕುತ್ತಿದ್ದರು ಎನ್ನಲಾಗಿದೆ, 2020 ರಲ್ಲಿ ನಿಧನರಾದ ಬಳಿಕ ಕಾರ್ಯದರ್ಶಿ ಪಿ.ಪಿ.ಮಾಧವನ್ ಮದುವೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಜೂನ್ 26ರಂದು ದೆಹಲಿಯ ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ, ಮಹಿಳೆಯನ್ನು ದೆಹಲಿಯ ಡಿಡಿಯು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಪೊಲೀಸರು ಆಕೆಗೆ ವೈದ್ಯಕೀಯ ಚಿಕಿತ್ಸೆ ನೀಡಿದರು ಎನ್ನಲಾಗಿದೆ. ಮಹಿಳೆಯ ದೂರಿನ ಪ್ರಕಾರ, 2022 ರ ಫೆಬ್ರವರಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿತ್ತು ಅಂತ ಆರೋಪಿಸಿದ್ದಾರೆ.

error: Content is protected !!