December 26, 2024

Newsnap Kannada

The World at your finger tips!

siddaramaiah

ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯಗೆ ಸೋನಿಯಾ ಆಹ್ವಾನ – ನಾನು ಒಲ್ಲೆ ಸಿದ್ದು

Spread the love

ನೀವು ರಾಷ್ಟ್ರ ರಾಜಕಾರಣಕ್ಕೆ ಬನ್ನಿ ಎಂದು ಕಾಂಗ್ರಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೀಡಿರುವ ಆಹ್ವಾನವನ್ನು ಮಾಜಿ ಸಿಎಂ ಸಿದ್ದರಾಮಯ್ಯ ನಯವಾಗಿ ನಿರಾಕರಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ
ತುರ್ತು ಬುಲಾವ್ ಮೇರೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡಿದ್ದಾರೆ . ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆಗಿನ ಭೇಟಿ ಅಂತ್ಯವಾಗಿದೆ.

ದೆಹಲಿಯ ಜನಪಥ್ ರಸ್ತೆಯಲ್ಲಿರುವ ನಿವಾಸದಲ್ಲಿ ಭೇಟಿಯಾದ ಸಿದ್ದರಾಮಯ್ಯಗೆ ಜಮೀರ್ ಅಹ್ಮದ್ ಸಾಥ್ ನೀಡಿದರು.

ಈ ವೇಳೆ ಸೋನಿಯಾ ಗಾಂಧಿಯವರನ್ನು ಭೇಟಿ ಸಮಯದಲ್ಲಿ ಸಿದ್ದರಾಮಯ್ಯ, ಸುಮಾರು 30 ನಿಮಿಷಗಳ ಕಾಲ ಚರ್ಚೆ ನಡೆಸಿದರು.

ಮಾತುಕತೆ ವೇಳೆ ಸೋನಿಯಾ ಸಿದ್ದರಾಮಯ್ಯರನ್ನು ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ಮಾಡಿದ್ದಾರೆ ಎಂದು ಗೊತ್ತಾಗಿದೆ

ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ, ಪದಾಧಿಕಾರಿಗಳ ನೇಮಕ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಪಕ್ಷದ ಜವಾಬ್ದಾರಿ ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ಅವರ ಅಭಿಪ್ರಾಯವನ್ನು ಸೋನಿಯಾ ಗಾಂಧಿ ಕೇಳಿದ್ದಾರೆ. ಎಐಸಿಸಿ ಪುನರ್ ರಚನೆ ಬಗ್ಗೆಯೂ ಸಲಹೆ ಪಡೆದಿದ್ದಾರೆ ಎನ್ನಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಮಾಜಿ ಸಿಎಂ, ಸೋನಿಯಾ ಗಾಂಧಿಯವರಿಗೆ ನಾನು ರಾಷ್ಟ್ರ ರಾಜಕೀಯಕ್ಕೆ ಬರುವುದಿಲ್ಲ. ನನಗೆ ರಾಷ್ಟ್ರ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಪದಾಧಿಕಾರಿಗಳ ಆಯ್ಕೆ ಬಗ್ಗೆ ಚರ್ಚೆ ಮಾಡಿದರು.

Copyright © All rights reserved Newsnap | Newsever by AF themes.
error: Content is protected !!