December 24, 2024

Newsnap Kannada

The World at your finger tips!

sonu suda s

ಹುಟ್ಟೂರಿನಲ್ಲೂ ಸೋನು ಸೂದ್ ಸಹೋದರಿ ಮಾಳವಿಕಾ ಸೂದ್ ಸೋಲು – ಎಪಿಪಿ ಅಭ್ಯರ್ಥಿ ಗೆಲುವು

Spread the love

ಕಾಂಗ್ರೆಸ್‍ನಿಂದ ಸ್ಪರ್ಧೆ ಮಾಡಿದ್ದ ನಟ ಸೋನು ಸೂದ್ ಸಹೋದರಿ ಮಾಳವಿಕಾ ಸೂದ್ ಪಂಜಾಬ್ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದಾರೆ.

ಮಾಳವಿಕಾ ಸೂದ್ ತಮ್ಮ ಹುಟ್ಟೂರಾದ ಪಂಜಾಬ್‍ನ ಮೊಗಾದಲ್ಲಿ ಮೊಗಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದರು.

ಮಾಳವಿಕಾ ಸೂದ್, ಎಎಪಿಯ ಅಮನ್‍ದೀಪ್ ಕೌರ್ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ.

ಸೂದ್ ಚಾರಿಟಿ ಫೌಂಡೇಶನ್‍ನೊಂದಿಗೆ ಮಾಳವಿಕಾ ಸೂದ್ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ, ಆದರೆ ಮತದಾರ ಇವರ ಕೈ ಹಿಡಿದಿಲ್ಲ.

ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಬಡಜನರಿಗೆ ಸೋನು ಸೂದ್ ಅಪಾರ ನೆರವು ಒದಗಿಸುವ ಮೂಲಕ ನಿಜಜೀವನದಲ್ಲೂ ಹೀರೋ ಎನಿಸಿಕೊಂಡಿದ್ದರು.

ಸಹೋದರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾರಣ ಸಹೋದರಿ ಪರವಾಗಿ ಅಬ್ಬರದ ಪ್ರಚಾರವನ್ನು ಮಾಡಿದ್ದರು. ಆದರೆ ಇದು ಯಾವುದೂ ಸೋನು ಸಹೋದರಿಗೆ ಫಲಸಿಕ್ಕಿಲ್ಲ.

Copyright © All rights reserved Newsnap | Newsever by AF themes.
error: Content is protected !!