ಬೆಂಗಳೂರು
ಇತ್ತೀಚಿಗೆ ವಿಜಯಪುರದಲ್ಲಿ ಜರುಗಿದ 37ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ನಾನು ನೀಡಿರುವ ಕಾರ್ಯನಿರತ ಪತ್ರಕರ್ತರ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಕಟಿಬದ್ದನಾಗಿದ್ದು, ನನ್ನ ಈಗಿನ ಅಧಿಕಾರಾವಧಿಯೊಳಗೇ ಈಡೇರಿಸುವದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಪುನರುಚ್ಚರಿಸಿದರು.ಮಂಡ್ಯದಲ್ಲಿ ಬ್ರಹ್ಮಚಾರಿಗಳ ಪಾದಯಾತ್ರೆಗೆ ನಟ ಧನಂಜಯ ಚಾಲನೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)
ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ನೇತೃತ್ವದಲ್ಲಿಂದು ಕಾರ್ಯ ನಿರತ ಪತ್ರಕರ್ತರ ನಿಯೋಗ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ವೇಳೆ ಈ ಭರವಸೆ ನೀಡಿದರಲ್ಲದೆ, ಭರವಸೆ ಈಡೇರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಗ್ರಾಮೀಣ ಪತ್ರಕರ್ತರಿಗೆ ಕೂಡಲೇ ಬಸ್ ಪಾಸ್ ಕೊಡಲು ಆದೇಶ ಹೊರಡಿಸುವುದಾಗಿ ತಿಳಿಸಿದರು.
ಕಾರ್ಯನಿರತ ಪತ್ರಕರ್ತರನ್ನು ಯಶಸ್ವಿನಿ ಯೋಜನೆ ವ್ಯಾಪ್ತಿಗೆ ಒಳಪಡಿಸುವುದು, ನಿವೃತ್ತ ಪತ್ರಕರ್ತರಿಗೆ ನೀಡಲಾಗುತ್ತಿರುವ ಮಾಸಾಶನವನ್ನು 10 ಸಾವಿರ ರೂ.ಗಳಿಂದ 20 ಸಾವಿರ ರೂ.ಗಳಿಗೆ ಹೆಚ್ಚಿಸುವದು, ಪತ್ರಕರ್ತರ ಕ್ಷೇಮಾಭಿವೃದ್ದಿಗೆ 100 ಕೋಟಿ ರೂಗಳನ್ನು ಮೀಸಲಿಡುವದು, ಪತ್ರಕರ್ತರ ಭರವಸೆಗಳು, ಕೆಯುಡಬ್ಲೂಜೆ ಅಡಿಯಲ್ಲಿ ನಿರ್ವಹಣೆಯಾಗುವಂತೆ ಪ್ರತ್ಯೇಕ ಆದೇಶ ಹೊರಡಿಸುವ ಕಾರ್ಯನಿರತ ಪತ್ರಕರ್ತರ ಬಹುದಿನಗಳ ಈ ಪ್ರಮುಖ ಬೇಡಿಕೆಗಳನ್ನು ನನ್ನ ಅಧಿಕಾರ ಅವಧಿಯಲ್ಲೇ ಈಡೇರಿಸುವದಾಗಿ ಹೇಳಿದರು.
ಇನ್ನಿತರೆ ಬೇಡಿಕೆಗಳನ್ನು ಆಧ್ಯತೆ ಮೇರೆಗೆ ಪರಿಶೀಲಿಸಿ ಅವುಗಳನ್ನೂ ಸಹ ಈಡೇರಿಸಲು ಕ್ರಮ ಜರುಗಿಸಲಾಗುವುದು ಎಂದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ