Categories: Main News

ಮುಂದೆ ಸಿಎಂ ಬದಲಾವಣೆ ಬಗ್ಗೆ ತಿಳಿಸುವೆ : ಅರುಣ್ ಸಿಂಗ್

ಸಿಎಂ ಬದಲಾವಣೆ ಕುರಿತು ಮುಂದೆ ತಿಳಿಸುತ್ತೇನೆ. ನಾಯಕತ್ವ ಬದಲಾವಣೆ ಕುರಿತು ಯಾವುದೇ ಮಾಹಿತಿ ನೀಡಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನಿರಾಕರಿಸಿದ್ದಾರೆ.‌

ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅರುಣ್ ಸಿಂಗ್ ಮುಖ್ಯಮಂತ್ರಿ ಬದಲಾವಣೆ ಕುರಿತು ನನಗೆ ಎಷ್ಟು ತಿಳಿದಿದೆಯೋ ಅಷ್ಟನ್ನೂ ಹೇಳಿದ್ದೇನೆ. ಹೆಚ್ಚಿನ ಮಾಹಿತಿ ತಿಳಿಯಬೇಕಿದೆ. ಈ ಬಗ್ಗೆ ಮುಂದೆ ನಿಮಗೆ ತಿಳಿಸುತ್ತೇನೆ ಎಂದಷ್ಟೇ ಹೇಳಿದರು.

ಕೋವಿಡ್ ಸಂಕಷ್ಟ ಕಾಲದಲ್ಲಿ ಕಾರ್ಯಕರ್ತರು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಜೀವವನ್ನು ಲೆಕ್ಕಿಸದೆ, ಸಾರ್ವಜನಿಕರ ಸೇವೆ ಮಾಡಿದ್ದಾರೆ, ಸೇವೆಯೇ ಸಂಘಟನೆ ಎಂಬ ಮನೋಭಾವದಿಂದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಸೇವೆ ಮಾಡುವುದು ನಮ್ಮ ಪರಮ ಕರ್ತವ್ಯವಾಗಿದೆ. ಆದರೆ ಇಂತಹ ಕಠಿಣ ಪರಿಸ್ಥಿತಿಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದವರು ಆರೋಪ, ಪ್ರತ್ಯಾರೋಪ ಮಾಡುತ್ತಿದ್ದಾರೆ. ಜೆಡಿಎಸ್‍ನವರು ಇಂತಹ ಸಂದರ್ಭದಲ್ಲಿ ಕ್ವಾರಂಟೈನ್‍ನಲ್ಲಿ ಉಳಿದಿದ್ದಾರೆ ಎಂದು ಹರಿಹಾಯ್ದರು.

ಬಿಜೆಪಿ ಕಾರ್ಯಕರ್ತರು ಗಿಡ ನೆಡುವುದು, ಒನ್ ಟೈಪ್ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸುವುದು ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದ್ದಾರೆ. ಅಲ್ಲದೆ ಮುಂದೆ ಯೋಗ ದಿನಾಚರಣೆಯನ್ನು ಸಹ ಅದ್ಧೂರಿಯಾಗಿ ಮಾಡಬೇಕಿದೆ. ಈ ಕಾರ್ಯಕ್ರಮಗಳ ಕುರಿತು ಸಹ ಕಾರ್ಯಕರ್ತರೊಂದಿಗೆ ಹಾಗೂ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸಬೇಕಿದೆ ಎಂದು ವಿವರಿಸಿದರು

ಅರುಣ್ ಸಿಂಗ್ ಸ್ವಾಗತಕ್ಕೆ ದೆಹಲಿ ವಿಶೇಷ ಪ್ರತಿನಿಧಿ ಶಂಕರ್ ಗೌಡ ಪಾಟೀಲ್ ಆಗಮಿಸಿದ್ದರು.

Team Newsnap
Leave a Comment
Share
Published by
Team Newsnap

Recent Posts

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024