ಶೀಘ್ರದಲ್ಲೇ ಜಿಪಂ, ತಾ ಪಂ ಚುನಾವಣೆ: ಸಿಎಂ ಸಿದ್ದರಾಮಯ್ಯ

Team Newsnap
1 Min Read

ಮೈಸೂರು: ರಾಜ್ಯದಲ್ಲಿ ಶೀಘ್ರದಲ್ಲೇ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಯಾವಾಗ ನಡೆಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಆದಷ್ಟು ಬೇಗನೆ ಜಿಲ್ಲಾ- ತಾಲೂಕು ಪಂಚಾಯತಿ ಚುನಾವಣೆ ನಡೆಸುತ್ತೇವೆ ಎಂದರು.

ಸೇಡಿನ ರಾಜಕಾರಣ ಮಾಡಲ್ಲ :

ಕಾಂಗ್ರೆಸ್ ನಿಂದ ಯಡಿಯೂರಪ್ಪ ಟಾರ್ಗೆಟ್ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ನನ್ನನ್ನು ಸೇರಿದಂತೆ ರಾಹುಲ್ ಗಾಂಧಿ, ಡಿಕೆ ಶಿವಕುಮಾರ್ ವಿರುದ್ಧ ದೂರು ನೀಡಿದ್ದಾರೆ. ಹಾಗಾದರೆ ಇದನ್ನು ಏನೆಂದು ಹೇಳಬೇಕು. ನಾವು ಕ್ರಮ ಕೈಗೊಂಡರೇ ಟಾರ್ಗೆಟ್ ಎನ್ನುತ್ತಾರೆ. ಅವರು ಮಾಡುತ್ತಿರುವುದು ಏನು ಎಂದು ಪ್ರಶ್ನಿಸಿದರು.ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕೇಂದ್ರ ಸಚಿವ ಎಚ್ ಡಿ ಕೆ

ನಾವು ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಇಂದು ಮತ್ತೊಮ್ಮೆ ಹೇಳುತ್ತಿದ್ದೇನೆ. ನಾವು ಸೇಡಿನ ರಾಜಕಾರಣ ಮಾಡುವುದಿಲ್ಲ. ದ್ವೇಷ ಪ್ರತೀಕಾರ ತೀರಿಸಿಕೊಳ್ಳುವುದಿಲ್ಲ ಎಂದರು.

Share This Article
Leave a comment