ಮುಖ್ಯ ಮಂತ್ರಿಗಳು ಖಡಕ್ ಸೂಚಿನೆ ಕೊಟ್ಟ ನಂತರ ಸಚಿವ ಸುಧಾಕರ್ ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾಗಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಟ್ವಿಟ್ ನಲ್ಲಿ ತಿಳಿಸಿದ್ದಾರೆ.
ಎಲ್ಲಾ ನಾಯಕರು, ಎಲ್ಲಾ ಸಚಿವರು, ಶಾಸಕರು, ವಿರೋಧ ಪಕ್ಷದ 225 ಜನರ ಮೇಲೆಯೂ ತನಿಖೆ ಆಗಲಿ’ ಅನ್ನೋ ಸುಧಾಕರ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಡಾ.ಸುಧಾಕರ್.. ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲಾ ಶಾಸಕ ಮಿತ್ರರ ಬಗ್ಗೆ ನನಗೆ ಅಪಾರವಾದ ಗೌರವ ಇಟ್ಟುಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಟ್ವಿಟ್ ನಲ್ಲಿ ಏನಿದೆ? :
ಹೀಗಾಗಿ ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾಗಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ನಮ್ಮ ಹದಿನೇಳು ಜನರ ವಿರುದ್ಧ ತೇಜೋವಧೆ ಯತ್ನ ನಡೆಸಿದ್ದ ಕೆಲ ನಾಯಕರ ವಿರುದ್ಧ ಮಾತ್ರವೇ ನಾನು ಹೇಳಿಕೆ ನೀಡುವ ಯತ್ನ ಮಾಡಿದ್ದೇನೆಯೇ ಹೊರತು ಎಲ್ಲಾ ಶಾಸಕರಿಗೆ ನೋವು ಉಂಟು ಮಾಡುವ ಉದ್ದೇಶ ನನಗಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ