ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಶ್ನೆ ಪತ್ರಿಕೆ ಲೀಕ್ – ಸೌಮ್ಯ 13 ದಿನ ಪೊಲೀಸ್ ವಶಕ್ಕೆ

Team Newsnap
1 Min Read

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬಂಧನಕ್ಕೆ ಒಳಗಾಗಿದ್ದ ಆರೋಪಿ ಮೈಸೂರಿನ ಸೌಮ್ಯಾರನ್ನು 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

sowmya r

ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ಪ್ರಕರಣದ ಹೆಚ್ಚಿನ ತನಿಖೆ ನಡೆಸುವ ಅವಶ್ಯಕತೆ ಇದೆ ಸೌಮ್ಯರನ್ನು ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳಿಕೊಂಡಿದ್ದರು.

ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಒಂದನೇ ಎಸಿಎಂಎಂ ನ್ಯಾಯಾಧೀಶರಾದ ಮಧು ಅವರು ಆದೇಶ ನೀಡಿದ್ದಾರೆ.

ಪರೀಕ್ಷೆ ದಿನ ಎಲ್ಲರ ಹಾಜರಾತಿಗೂ ಮೊದಲು ಪರೀಕ್ಷಾ ಕೇಂದ್ರ ಉಸ್ತುವಾರಿಗಳು ಹಾಜರಿರುತ್ತಾರೆ. ಅಂದರೆ 40 ನಿಮಿಷ ಮೊದಲು ವಿದ್ಯಾರ್ಥಿಗಳಿಗಿಂತ ಮುಂಚೆ ಪ್ರಶ್ನೆಪತ್ರಿಕೆ ಕೊಠಡಿ ಇನ್ವಿಜಿಲೇಟರ್‌ಗೆ ಸಿಕ್ಕಿರುತ್ತದೆ.

ಈ ಅವಧಿಯಲ್ಲಿ ಸೌಮ್ಯಾರಿಗೆ ಪ್ರಶ್ನೆಪತ್ರಿಕೆ ಸಿಕ್ಕಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಕೆಲ ಪ್ರಶ್ನೆಗಳನ್ನು ಅಭ್ಯರ್ಥಿಗಳಿಗೆ ಸೌಮ್ಯ ಕಳುಹಿಸಿರಬಹುದು. 18 ಪ್ರಶ್ನೆಗಳು ಮೊಬೈಲ್ ಸ್ಕ್ರೀನ್‌ಶಾಟ್‌ನಲ್ಲಿದ್ದು 11 ಪ್ರಶ್ನೆಗಳು ಒಂದೇ ಥರ ಇದ್ದವು. ಸದ್ಯ ಇದೇ ಆಂಗಲ್‌ನಲ್ಲಿ ಮಲ್ಲೇಶ್ವರಂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಹಗರಣದಲ್ಲಿ ಪ್ರಾಧ್ಯಾಪಕರೊಬ್ಬರ ಪಾತ್ರ ಇದೆ ಎನ್ನಲಾಗುತ್ತಿದೆ, ಪ್ರಕರಣವನ್ನು ಮುಚ್ಚಿಡುವ ಯತ್ನ ಕೂಡ ನಡೆಯುತ್ತಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

Share This Article
Leave a comment