ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅಭಿನಯದ ‘ಮಿಥುನಂ’ ಸಿನಿಮಾ ಅನೇಕ ವರ್ಷಗಳ ಬಳಿಕ ಕನ್ನಡದಲ್ಲಿ ರಿಲೀಸ್ ಆಗುತ್ತಿದೆ.
ಗಾಯನದ ಜೊತೆಗೆ ನಟನೆಯ ಮೂಲಕವೂ ಗಮನ ಸೆಳೆದಿರುವ ಎಸ್ ಪಿ ಬಿ ಸುಮಾರು 70ಕ್ಕು ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ 8 ವರ್ಷಗಳ ಹಿಂದೆ ತೆರೆಕೊಂಡಿದ್ದ ತೆಲುಗು ಸಿನಿಮಾ ಮಿಥುನಂ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗುತ್ತಿದೆ.
2012ರಲ್ಲಿ ರಿಲೀಸ್ ಆಗಿದ್ದ ಮಿಥುನಂ ಸಿನಿಮಾದಲ್ಲಿ ಎಸ್ ಪಿ ಬಿ ಮತ್ತು ನಟಿ ಲಕ್ಷ್ಮೀ ಪ್ರಮುಖ ಪಾತ್ರದಲ್ಲಿ ನಟಿದ್ದಾರೆ. ಶ್ರೀರಮಣ ಬರೆದಿದ್ದ ಮಿಥುನಂ ಕಾದಂಬರಿಗೆ ಸಿನಿಮಾ ರೂಪ ನೀಡಿದ್ದರು ತನಿಕೆಳ್ಳ ಭರಣಿ. ಇದೀಗ ಈ
ಸಿನಿಮಾವನ್ನು ಕನ್ನಡದಲ್ಲಿ ರಿಲೀಸ್ ಮಾಡಲು ನಿರ್ಧರಿಸಲಾಗಿದೆ.
ಸೌಂಡ್ ಆಫ್ ಮ್ಯೂಸಿಕ್ ಗುರುರಾಜ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಕಾರ್ಯ ನಡೆಯುತ್ತಿದೆ. ಡಬ್ಬಿಂಗ್ ಕಾರ್ಯ ಸಂಪೂರ್ಣವಾಗಿ ಮುಗಿದ ಬಳಿಕ ಸಿನಿಮಾ ತೆರೆಗೆ ಬರಲಿದೆ ಎಂದು ಹೇಳಲಾಗುತ್ತಿದೆ. ಡಿಸೆಂಬರ್ ತಿಂಗಳಲ್ಲಿ ಈ ಸಿನಿಮಾವನ್ನು ರಾಜ್ಯದಾದ್ಯಂತ ರಿಲೀಸ್ ಮಾಡಲು ಸಿದ್ಧತೆ ನಡೆಯಲಾಗಿದೆಯಂತೆ.
ಕನ್ನಡದಲ್ಲಿ ಮಿಥುನಂ ಸಿನಿಮಾ, ಮಿಥುನ ಹೆಸರಿನಲ್ಲಿ ತೆರೆಗೆ ಬರುತ್ತಿದೆ. ವಿಶೇಷ ಎಂದರೆ ಈ ಸಿನಿಮಾ ನಾಲ್ಕು ರಾಜ್ಯ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಹೊಸ ಸಿನಿಮಾಗಳು ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗುತ್ತಿರುವ ಈ ಸಮಯದಲ್ಲಿ ಹಳೆಯ ಸಿನಿಮಾವನ್ನು ಡಬ್ ಮಾಡಿ ರಿಲೀಸ್ ಮಾಡುತ್ತಿರುವುದು ವಿಶೇಷ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು