ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ತಿರುಪತಿಯಲ್ಲಿ ನಡೆದ ದುರಂತದಲ್ಲಿ 6 ಭಕ್ತರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಘಟನೆ ಹಿನ್ನೆಲೆ, ಸಿಎಂ ಚಂದ್ರಬಾಬು ನಾಯ್ಡು ತಿರುಪತಿಯ ಭೈರಾಗಿಪಟ್ಟೆದ ಪದ್ಮಾವತಿ ಪಾರ್ಕ್ ಬಳಿ ಸ್ಥಳ ಪರಿಶೀಲನೆ ನಡೆಸಿದರು. ಅವರು ಘಟನೆಯ ಬಗ್ಗೆ ಅಧಿಕಾರಿಗಳಿಂದ ವಿವರ ಪಡೆದು ಭದ್ರತೆ ಸಂಬಂಧಿಸಿದ ಲೋಪಗಳ ಬಗ್ಗೆ ತರಾಟೆಗೆ ತೆಗೆದುಕೊಂಡರು.
“2000 ಜನರಿಗೆ ಮಾತ್ರ ಅನುಮತಿ ಇದ್ದಾಗ 2500 ಜನರನ್ನು ಒಳಗೆ ಬಿಡುವುದು ಯಾಕೆ?” ಎಂದು ಕಟುಪ್ರಶ್ನೆ ಕೇಳಿದ ಸಿಎಂ, ಭದ್ರತೆ ಸಂಬಂಧವಾಗಿ ಹೆಚ್ಚು ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಇದನ್ನು ಓದಿ –ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
ಈ ದುರಂತದ ಹಿನ್ನೆಲೆಯಲ್ಲಿ ಟಿಟಿಡಿ ಆಡಳಿತ ಮಂಡಳಿ ಗಾಯಾಳು ಭಕ್ತರಿಗೆ ತಿಮ್ಮಪ್ಪನ ವಿಶೇಷ ದರ್ಶನದ ಸೌಕರ್ಯವನ್ನು ಒದಗಿಸಿದ್ದು, ಅವರ ಪರಿಹಾರಕ್ಕಾಗಿ ಕ್ರಮ ಕೈಗೊಂಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು