ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದೇವಾಲಯಗಳ ದರ್ಶನಕ್ಕೂ ನಿರ್ಬಂಧ ಹೇರಿದೆ.
ಆದರೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಮಂಗಳವಾರ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಅಲ್ಲದೇ ಕಪಿಲಾ ನದಿ ದಡದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.
ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಸಿಎಂ ಪುತ್ರ ಬಿ.ವೈ ವಿಜಯೇಂದ್ರ ಪತ್ನಿ ಸಮೇತರಾಗಿ ದೇವಾಲಯಕ್ಕೆ ಭೇಟಿ ನೀಡಿರುವುದು ಅಪರಾಧ ಸರಿ? ಇದು ಕೋವಿಡ್ ನಿಯಮದ ಉಲ್ಲಂಘನೆ ಅಲ್ಲವೆ ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
ಬಿ.ವೈ.ವಿಜಯೇಂದ್ರ ಅವರನ್ನು ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ರವೀಂದ್ರ ಬರಮಾಡಿ ಕೊಂಡು ದೇಗುಲದ ಬಾಗಿಲು ತೆರೆದು ದೇವಾಲಯದೊಳಗೆ ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.
ನಂತರ ಕಪಿಲಾ ನದಿ ತೀರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿಜಯೇಂದ್ರ ದಂಪತಿಗಳು ಕಪಿಲಾ ನದಿಗೆ ಬಾಗಿನ ಅರ್ಪಿಸಿದ್ದಾರೆ.
ಮುಖ್ಯಮಂತ್ರಿಗಳ ಪುತ್ರ ಹಾಗೂ ಅವರ ಕುಟುಂಬದವರಿಗೆ ಸಾಕಷ್ಟು ಬಿಗಿಭದ್ರತೆ ನೀಡಲಾಗಿತ್ತು.
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ