ಕೊರೋನಾ ನಿಯಮ ಮೀರಿ ಸಿಎಂ ಪುತ್ರನಿಂದ ವಿಶೇಷ ಪೂಜೆ – ಸಾರ್ವಜನಿಕರ ಟೀಕೆ

Team Newsnap
1 Min Read

ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದೇವಾಲಯಗಳ ದರ್ಶನಕ್ಕೂ ನಿರ್ಬಂಧ ಹೇರಿದೆ.

ಆದರೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಮಂಗಳವಾರ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಅಲ್ಲದೇ ಕಪಿಲಾ ನದಿ ದಡದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ್ದಾರೆ.‌ ಇದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಸಿಎಂ ಪುತ್ರ ಬಿ.ವೈ ವಿಜಯೇಂದ್ರ ಪತ್ನಿ ಸಮೇತರಾಗಿ ದೇವಾಲಯಕ್ಕೆ ಭೇಟಿ ನೀಡಿರುವುದು ಅಪರಾಧ ಸರಿ? ಇದು ಕೋವಿಡ್ ನಿಯಮದ ಉಲ್ಲಂಘನೆ ಅಲ್ಲವೆ ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಬಿ.ವೈ.ವಿಜಯೇಂದ್ರ ಅವರನ್ನು ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ರವೀಂದ್ರ ಬರಮಾಡಿ ಕೊಂಡು ದೇಗುಲದ ಬಾಗಿಲು ತೆರೆದು ದೇವಾಲಯದೊಳಗೆ ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.

ನಂತರ ಕಪಿಲಾ ನದಿ ತೀರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿಜಯೇಂದ್ರ ದಂಪತಿಗಳು ಕಪಿಲಾ ನದಿಗೆ ಬಾಗಿನ‌ ಅರ್ಪಿಸಿದ್ದಾರೆ.

ಮುಖ್ಯಮಂತ್ರಿಗಳ ಪುತ್ರ ಹಾಗೂ ಅವರ ಕುಟುಂಬದವರಿಗೆ ಸಾಕಷ್ಟು ಬಿಗಿಭದ್ರತೆ ನೀಡಲಾಗಿತ್ತು.

Share This Article
Leave a comment