ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕ ‘ದೇವರ ಮೊಸಳೆ’ ಬಬಿಯಾ ಇನ್ನಿಲ್ಲ

Team Newsnap
1 Min Read
Anantapur Sri Anantadmanabha Swamy Temple's Crocodile' Babia is no more ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕ 'ದೇವರ ಮೊಸಳೆ' ಬಬಿಯಾ ಇನ್ನಿಲ್ಲ

ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು.ದೇಶಾದ್ಯಂತ ಭಕ್ತರನ್ನ ಹೊಂದಿರುವ ಅನಂತ ಪದ್ಮನಾಭ ದೇವಸ್ಥಾನದಲ್ಲಿದ್ದ ಮೊಸಳೆ ಹೆಸರು ಬಬಿಯಾ.

ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಇದನ್ನು ಓದಿ –ಹಾವೇರಿಯ 86 `ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ‘ ಮತ್ತೆ ಮುಂದೂಡಿಕೆ

ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.

ದೇವರ ನೈವೇದ್ಯವೇ ಬಬಿಯಾಗೆ ನಿತ್ಯ ಆಹಾರ. ಇದು ದೇವರಿಗೆ ಕಾವಲು ಇರುವ ಮೊಸಳೆ ಎಂದು ಖ್ಯಾತಿ ಪಡೆದಿತ್ತು. ದೇವಸ್ಥಾನದ ಕೆರೆ ವರ್ಷದ 365 ದಿನವೂ ತುಂಬಿ ಶುದ್ಧ ನೀರಿನಿಂದ ಕಂಗೊಳಿಸುತ್ತಿತ್ತು.

ಈ ಕೆರೆಗೆ ಭಕ್ತರೂ ಇಳಿಯುತ್ತಿದ್ದರು ಆದರೆ ಇದುವರೆಗೂ ಯಾರಿಗೂ ನೋವನ್ನುಂಟು ಮಾಡಿದ ಘಟನೆಗಳೇ ಇಲ್ಲ ಎಂದು ಇಲ್ಲಿನ ಸ್ಥಳೀಯರು ಹೇಳಿದ್ದಾರೆ.

Share This Article
Leave a comment