ಕರ್ನಾಟಕದ ಕನ್ನಡ ಸಾಹಿತ್ಯ ಪರಿಷತ್ತ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ’ಗೆ ಹಿರಿಯ ರಾಜಕೀಯ ಮುತ್ಸದ್ದಿ, ಎಚ್.ಡಿ.ದೇವೇಗೌಡರು ಆಯ್ಕೆಯಾಗಿದ್ದಾರೆ.
ಕನ್ನಡದ ಹೆಮ್ಮೆಯ ಮಣ್ಣಿನ ಮಗ ಎಂದು ಕರೆಸಿಕೊಂಡ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ಈ 2022ನೇ ಸಾಲಿನ ‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ’ಗೆ ಭಾಜನರಾಗಿರುತ್ತಾರೆ. ಸದರಿ ಪ್ರಶಸ್ತಿಯು 51,000 ರೂಪಾಯಿ ನಗದು ಸ್ಮರಣಿಕೆ, ಫಲ ತಾಂಬೂಲ ಒಳಗೊಂಡಿರುತ್ತದೆ.
ಈ ಕುರಿತು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿನ ಅಭ್ಯುದಯದ ಕನಸು ಕಂಡವರು. ಅವರ ಆಶಯದಂತೆ ನಾಡಿನಲ್ಲಿ ಕೃಷಿ, ನೀರಾವರಿ, ವಿದ್ಯುಚ್ಛಕ್ತಿ, ಹಿಂದುಳಿದ ವರ್ಗಗಳ ಕಲ್ಯಾಣ, ಸಾಮಾಜಿಕ ನ್ಯಾಯ, ಮಹಿಳಾ ಸಬಲಿಕರಣ, ಗ್ರಾಮ ನೈರ್ಮಲೀಕರಣ, ವೈದ್ಯಕೀಯ ಕ್ಷೇತ್ರ, ನೀರಿನ ಸೌಕರ್ಯ, ಸಾರಿಗೆ ಸೌಲಭ್ಯ, ಕೈಗಾರಿಕಾ ಕ್ಷೇತ್ರ, ವ್ಯಾಪಾರ ಸೇರಿದಂತೆ ನಾಡಿನ ಸರ್ವತೋಮುಖ ಅಭಿವೃದ್ಧಿ ವಿಚಾರದಲ್ಲಿ ಸಾಧನೆ ಮಾಡಿದವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು