March 15, 2026

Newsnap Kannada

The World at your finger tips!

sucide

ಶ್ರೀ ರಂಗಪಟ್ಟಣ : ಕೊರೋನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ

Spread the love

ಕೊರೋನಾ ಸೋಂಕಿತ ವ್ಯಕ್ತಿಯೊಬ್ಬ ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದ ಶ್ರೀರಂಗಪಟ್ಟಣ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಡೆದಿದೆ.

ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಜೈ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಕುಮಾರ್ ಏಪ್ರಿಲ್ 21ರಿಂದ ಕೊರೋನಾ ಸೋಂಕಿನ ಕಾರಣದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದನು. ಸೋಮವಾರ ಬೆಳಿಗ್ಗೆ ಆಸ್ಪತ್ರೆಯ ಆವರಣದಲ್ಲಿ ಇರುವ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಖಚಿತ ಕಾರಣ ಗೊತ್ತಾಗಿಲ್ಲ

ಶ್ರೀರಂಗ ಪಟ್ಟಣ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.‌

error: Content is protected !!