ನಂಜನಗೂಡಿನಲ್ಲಿ ಶ್ರೀಕಂಠೇಶ್ವರಸ್ವಾಮಿ ಜಾತ್ರಾ ಮಹೋತ್ಸವ : ಲಕ್ಷಾಂತರ ಭಕ್ತರ ಆಗಮನ

Team Newsnap
1 Min Read
Srikantheswaraswamy Jatra Mahotsav in Nanjangud: lakhs of devotees ನಂಜನಗೂಡಿನಲ್ಲಿ ಶ್ರೀಕಂಠೇಶ್ವರಸ್ವಾಮಿ ಜಾತ್ರಾ ಮಹೋತ್ಸವ : ಲಕ್ಷಾಂತರ ಭಕ್ತರ ಆಗಮನ

ದಕ್ಷಿಣ ಕಾಶಿ ಎಂದು ಪ್ರಸಿದ್ಧಿಯಾಗಿರುವ ನಂಜನಗೂಡಿನಲ್ಲಿ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ಗೌತಮ ಪಂಚ ಮಹಾರಥೋತ್ಸವ ಈ ಬೆಳಗ್ಗೆ 6.00ರಿಂದ 6.40ವರೆಗಿನ ಶುಭ ಮೀನ ಲಗ್ನದಲ್ಲಿ ನಡೆಯಿತು

ಗಣಪತಿ, ಸುಬ್ರಹ್ಮಣ್ಯ, ಚಂಡಿಕೇಶ್ವರ, ಪಾರ್ವತಿ ಹಾಗೂ ಶ್ರೀಕಂಠೇಶ್ವರಸ್ವಾಮಿ ಮೆರವಣಿಗೆಯಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಂಡಿದ್ದರು.

ಜಾತ್ರೆಯ ಮತ್ತೊಂದು ಪ್ರಮುಖ ಆಕರ್ಷಣೆಯಾದ ತೆಪ್ಪೋತ್ಸವ ಏ. 4ರಂದು ರಾತ್ರಿ 7 ಗಂಟೆಗೆ ಕಪಿಲಾ ನದಿಯಲ್ಲಿ ನಡೆಯಲಿದೆ

ಶ್ರೀಕಂಠೇಶ್ವರ ಸ್ವಾಮಿಯವರ ದೇವಾಲಯದಲ್ಲಿಜರುಗುವ ದೊಡ್ಡಜಾತ್ರೆಯ ರಥೋತ್ಸವದಲ್ಲಿ ಗಣಪತಿ, ಸುಬ್ರಹ್ಮಣ್ಯ, ಚಂಡಿಕೇಶ್ವರ, ಪಾರ್ವತಿ ಹಾಗೂ ಶ್ರೀಕಂಠೇಶ್ವರಸ್ವಾಮಿ ಅವರು ಆಸೀನರಾಗಿರುವ 5 ಅಲಂಕೃತ ರಥಗಳು ಮೆರವಣಿಗೆಯಲ್ಲಿ ಸಾಗುತ್ತವೆ. ಜಾತ್ರೆಯ ಪ್ರಮುಖ ಆಕರ್ಷಣೆಯಾಗಿರುವ ಶ್ರೀಕಂಠೇಶ್ವರಸ್ವಾಮಿ ಆಸೀನರಾಗುವ ಗೌತಮ ರಥ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದ್ದು, ಸುಮಾರು 10 ಅಡಿ ವ್ಯಾಸದ ಆರು ಬೃಹತ್‌ ಚಕ್ರಗಳನ್ನು ಒಳಗೊಂಡಿದೆ.

ಯಾವುದೇ ಅಹಿತಕರ ಘಟನೆ ಜರುಗದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ಕಲ್ಪಿಸುವ ಜೊತೆಗೆ ಜಾತ್ರೆಯ ಸಮಯದಲ್ಲಿ ಹೆಚ್ಚಿನ ಜನ ಸಂದಣಿ ಇರುವ ನದಿ ತೀರ, ದೇವಾಲಯದ ಆವರಣ, ದಾಸೋಹ ಭವನ ಇನ್ನಿತರ ಪ್ರದೇಶಗಳಲ್ಲಿ ಕಳ್ಳತನ ಅಥವಾ ಇನ್ನಿತರ ಅಕ್ರಮ ಚಟುವಟಿಕೆಗಳು ಜರುಗದಂತೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.ಇದನ್ನು ಓದಿ –ಜೆಡಿಎಸ್ ಹಿರಿಯ ಶಾಸಕ ಎ.ಟಿ ರಾಮಸ್ವಾಮಿ ಬಿಜೆಪಿಗೆ ಸೇರ್ಪಡೆ

Share This Article
Leave a comment