ಬಂಧನಕ್ಕೊಳಗಾಗಿದ್ದ ಶೃಂಗೇರಿ ತಹಶೀಲ್ದಾರ್ ಅಂಬುಜಾ ಚಾಲಕ ಆತ್ಮಹತ್ಯೆ

Team Newsnap
1 Min Read

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ತಹಶೀಲ್ದಾರ್ ಅಂಬುಜಾ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿಜೇತ್(26) ಎಂಬ ಚಾಲಕನೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತ ಶೃಂಗೇರಿ ತಾಲೂಕಿನ ಹೆಗ್ತೂರು ಮೂಲದ ವಿಜೇತ್ ತಮ್ಮ ಮನೆಯ ಸಮೀಪದ ಅಡಿಕೆ ತೋಟದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅವಿವಾಹಿತನಾಗಿರುವ ವಿಜೇತ್ ಇತ್ತೀಚೆಗಷ್ಟೆ ಆತನ ತಂಗಿ ಮದುವೆ ನಿಶ್ಚಯವಾಗಿತ್ತು.

ಕಳೆದ 20 ದಿನಗಳ ಹಿಂದೆ ಶೃಂಗೇರಿ ತಹಶೀಲ್ದಾರ್ ಅಂಬುಜಾ ಕೂಡ ಭ್ರಷ್ಟಾಚಾರದಡಿ ಬಂಧನಕ್ಕೊಳಗಾಗಿದ್ದರು.

ಇದೇ ಜ.6ರಂದು ಹಕ್ಕುಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಂಬುಜಾ ಹಾಗೂ ಗ್ರಾಮ ಲೆಕ್ಕಾಧಿಕಾರಿ ಸಿದ್ದಪ್ಪ ಎಸಿಬಿ ಬಲೆಗೆ ಬಿದ್ದಿದ್ದರು.

ಹಕ್ಕುಪತ್ರ ನೀಡಲು ಶೃಂಗೇರಿಯ ಪ್ರವಾಸಿ ಮಂದಿರದಲ್ಲಿ 25 ಸಾವಿರ ಲಂಚ ಪಡೆದುಕೊಳ್ಳುವಾಗ ಗ್ರಾಮ ಲೆಕ್ಕಾಧಿಕಾರಿ ಹಣದ ಸಮೇತ ಸಿಕ್ಕಿಬಿದಿದ್ದರು.

ಪ್ರಕರಣ ಸಂಬಂಧ ಅಂಬುಜಾ ಹಾಗೂ ಗ್ರಾಮ ಲೆಕ್ಕಾಧಿಕಾರಿ ಸಿದ್ದಪ್ಪರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದರು.

ಇದಾದ ಸುಮಾರು 25 ದಿನಗಳ ಬಳಿಕ ತಹಶೀಲ್ದಾರ್ ಡ್ರೈವರ್ ವಿಜೇತ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ವಿಜೇತ್ ಸಾವಿಗೆ ಶೃಂಗೇರಿ ತಹಶೀಲ್ದಾರ್ ಕಚೇರಿಯಲ್ಲಿನ ಬ್ರೋಕರ್ ಗಳ ಹಾವಳಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Share This Article
Leave a comment