‘ರಾಜ್ಯದಲ್ಲಿ ಶಾಲೆ ಆರಂಭಿಸಲು ಯಾವುದೇ ಆತುರ ಇಲ್ಲ. ಮಕ್ಕಳ ಸುರಕ್ಷತೆಯೇ ನಮಗೆ ಮುಖ್ಯ. ಇನ್ನು ಒಂದು ವಾರದಲ್ಲಿ ನಾವು ಶಾಲೆಯ ಆರಂಭದ ಬಗ್ಗೆ ಸರ್ಕಾರಕ್ಕೆ ವರದಿ ನೀಡಲಾಗುವುದು’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ’ರಾಜ್ಯದಲ್ಲಿ ಶಾಲೆಗಳನ್ನು ಆರಂಭ ಮಾಡಬೇಕೋ ಬೇಡವೋ ಎಂಬ ಬಗ್ಗೆ ಆರೋಗ್ಯ ಇಲಾಖೆಯಿಂದಲೇ ಸರ್ಕಾರಕ್ಕೆ ವರದಿ ನೀಡುತ್ತೇವೆ. ಪೋಷಕರ, ಮಕ್ಕಳ ಜೊತೆ ಕೌನ್ಸೆಲಿಂಗ್ ನಡೆಸಿ, ಅವರ ಅಭಿಪ್ರಾಯದ ಆಧಾರದ ಶಾಲೆಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಎಲ್ಲ ಕ್ಷೇತ್ರದ ತಜ್ಞರ ಬಗ್ಗೆ ಚರ್ಚಿಸಿ ಅವರ ಅಭಿಪ್ರಾಯ ಪಡೆಯಲಾಗಿದೆ.’ ಎಂದರು.
ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಶಾಲೆಯ ಆರಂಭದ ಕುರಿತು ಅನೇಕ ಸುದ್ದಿಗಳು ಹರಿದಾಡಿದ್ದವು. ಇದರೊಂದಿಗೆ ಕೇಂದ್ರ ಸರ್ಕಾರವೂ ಶಾಲೆಗಳ ಪುನರಾರಂಭದ ಬಗ್ಗೆ ಮಾರ್ಗಸೂಚಿಯನ್ನು ಹೊರಡಿಸಿತ್ತು. ಹಾಗಾಗಿ ಕೊರೋನಾದಂತಹ ಸಂಕಷ್ಟದ ನಡುವೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಬಹಳ ಆತಂಕಗೊಂಡಿದ್ದರು. ಈಗ ಸರ್ಕಾರದ ಹೇಳಿಕೆಗಳು ಅವರ ಆತಂಕ ದೂರ ಮಾಡುವ ನಿಟ್ಟಿನಲ್ಲಿವೆ.
More Stories
ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು