VHP ಯಿಂದ ಶ್ರೀರಂಗಪಟ್ಟಣ ಚಲೋ- ನಿಷೇಧಾಜ್ಞೆ ಉಲ್ಲಂಘಿಸಿದರೆ ಕಾನೂನು ಕ್ರಮ; ಎಸ್ ಪಿ ಎಚ್ಚರಿಕೆ

Team Newsnap
1 Min Read
Srirangapatna chalo by VHP - Prosecution if violation of Ombudsman; S P Warning VHP

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯಲ್ಲಿ ಮದರಸಾ ಶಿಕ್ಷಣ ಮುಂದುವರೆದಿದೆ. ಮೌಲ್ವಿಗಳು ವಿದ್ಯಾರ್ಥಿಗಳಿಗೆ ಧಾರ್ಮಿಕ ಪಾಠ ಬೋಧಿಸುತ್ತಿದ್ದಾರೆ. ಮಸೀದಿಯಲ್ಲಿನ ಮದರಸಾ ನಿಲ್ಲಿಸಬೇಕು ಎಂದು ಆಗ್ರಹಿಸಿ ಶನಿವಾರ ವಿಶ್ವ ಹಿಂದೂ ಪರಿಷತ್ ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಿದೆ.

ಇದನ್ನು ಓದಿ –ದೇಶದಲ್ಲಿ ಕರೋನಾ ಹೆಚ್ಚಳ – 5 ರಾಜ್ಯಗಳಿಗೆ ಪತ್ರ – ರೈಲು ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ

ವಿವಾದದ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರತಿಭಟನೆಗಳಿಗೆ, ಮೆರವಣಿಗೆಗೆ ಅವಕಾಶವಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಮಂಡ್ಯ ಎಸ್ ಪಿ ಎನ್ ಯತೀಶ್ ಎಚ್ಚರಿಕೆ ನೀಡಿದ್ದಾರೆ.

ಮಸೀದಿ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಶ್ರೀರಂಗಪಟ್ಟನದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು, ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಪ್ರತಿಭಟನೆಗಳಿಗೂ ಅವಕಾಶವಿಲ್ಲ. ಒಂದು ವೇಳೆ ನಿಷೇಧಾಜ್ಞೆ ಉಲ್ಲಂಘನೆ ಮಾಡಿ ಹಿಂದೂ ಪರ ಸಂಘಟನೆ ಪ್ರತಿಭಟನೆಗೆ ಮುಂದಾದರೆ ಮುಲಾಜಿಲ್ಲದೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ

Share This Article
Leave a comment