ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಗುರುವಾರ ತಿಳಿಸಿದರು.
ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ ಮಹೋತ್ಸವ-2024ರ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
ನಾಡಿನ ದಸರಾ ಹಬ್ಬವು ಇಡೀ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿ ಪಡೆದಿದ್ದು, ನಮ್ಮ ನಾಡಿನ ಕಲ್ಯಾಣಕ್ಕೋಸ್ಕರ ಶ್ರೀ ಚಾಮುಂಡೇಶ್ವರಿ ತಾಯಿಯನ್ನು ಪೂಜಿಸಲಾಗುವುದು. ಶ್ರೀರಂಗಪಟ್ಟಣ ದಸರಾ ಹಬ್ಬದಲ್ಲಿ ಅನೇಕ ರೀತಿಯ ವಿಭಿನ್ನ ಸಾಂಸ್ಕೃತಿಕ ಉತ್ಸವಗಳು ನಡೆಯಲಿದ್ದು, ಸಾರ್ವಜನಿಕರಿಗೆ ಹಬ್ಬದ ವಾತಾವರಣವು ಉಂಟಾಗಲಿದೆ ಎಂದರು.
ಶ್ರೀರಂಗಪಟ್ಟಣ ದಸರಾ ಹಬ್ಬದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಂಡ್ಯ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು. ಜೊತೆಗೆ ನಮ್ಮ ನಾಡಿನ ಪರಂಪರೆಯನ್ನು ಉಳಿಸುವ ಕೆಲಸವಾಗಬೇಕು ಎಂದು ತಿಳಿಸಿದರು.
ಕಾವೇರಿ ಆರತಿಗೆ ದಸರಾ ಸಂದರ್ಭದಲ್ಲಿ ಚಾಲನೆ ನೀಡಲು ಚಿಂತನೆ ಹರಿದ್ವಾರ ಮತ್ತು ವಾರಣಾಸಿಯಲ್ಲಿ ನಡೆಯವ ಗಂಗಾರತಿಯು ಹಲವಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ಗಂಗಾರತಿಯ ಶೈಲಿಯಲ್ಲಿಯೇ ಕಾವೇರಿ ಆರತಿಯನ್ನು ಕೆ.ಆರ್.ಎಸ್ ನಲ್ಲಿ ಪ್ರಾರಂಭಿಸಲಾಗುವುದು. ಈ ಬಾರಿಯ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮದಲ್ಲೇ ಪ್ರಾರಂಭಿಸಲು ಚಿಂತಿಸಲಾಗುತ್ತಿದೆ ಎಂದರು.
ನಾಳೆ ಹರಿದ್ವಾರ ಮತ್ತು ವಾರಣಾಸಿಗೆ 28 ಜನರ ನಿಯೋಗ ಹರಿದ್ವಾರ ಹಾಗೂ ವಾರಣಾಸಿಗೆ ತೆರಳಲಿದೆ. ಅಲ್ಲಿಂದ ಬಂದ ನಂತರ ಕಾವೇರಿ ಮಾತೆಗೆ ಗಂಗಾರತಿ ಸಲ್ಲಿಸುವ ಸಂಬಂಧ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾಧಿಕಾರಿ ಡಾ ಕುಮಾರ ಅವರು ವೇದಿಕೆಯ ಮೇಲಿರುವ ಎಲ್ಲರನ್ನು ಸ್ವಾಗತಿಸಿ, ಪ್ರತಿ ವರ್ಷದಂತೆ ಈ ವರ್ಷವು ಶ್ರೀರಂಗಪಟ್ಟಣ ದಸರಾವನ್ನು ಆಚರಿಸಲಾಗುತಿದ್ದು, ಇಂದು ಲೋಗೋ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀರಂಗಪಟ್ಟಣ ದಸರಾಗೆ ಸಂಬಂಧಿಸಿದಂತೆ ಈಗಾಗಲೇ ಹಲವಾರು ಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದರು.ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು
ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ಮಂಡ್ಯ ಶಾಸಕ ಪಿ ರವಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು, ಮೈಸೂರು ಸಕ್ಕರೆ ಕಂಪನಿಯ ನಿಯಮಿತದ ಅಧ್ಯಕ್ಷ ಸಿ ಡಿ ಗಂಗಾಧರ್, ಉಪ ವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ