ಯೋಗಿತಾ (27) ಗಂಡನಿಂದಲೇ ಕೊಲೆಯಾದ ಮಹಿಳೆ. ರವಿ ಎಂಬಾತ ಮಕ್ಕಳ ಮುಂದೆಯೇ ಪತ್ನಿ ಕೊಲೆ ಮಾಡಿದ ಗಂಡ .ಇದನ್ನು ಓದಿ –ತಮ್ಮನ್ನು ಮಾತ್ರ ಬಲಿಪಶು ಮಾಡುವ ರಾಜಕಾರಣಿಗಳ ವಿರುದ್ದ ಪ್ರಧಾನಿ ಮೋದಿಗೆ ಅಧಿಕಾರಿಗಳಿಂದ ಪತ್ರ
ಪರಸ್ತ್ರೀ ಜೊತೆ ರವಿಗೆ ಅನೈತಿಕ ಸಂಬಂಧ ಇತ್ತು. ಇದು ಪತ್ನಿಗೂ ತಿಳಿದಿತ್ತು. ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಮನೆ ಬಿಟ್ಟು ಹೋಗುವಂತೆ ಪತ್ನಿಗೆ ಪದೇಪದೆ ರವಿ ಹಿಂಸೆ ನೀಡುತ್ತಿದ್ದ ಎಂದು ಹೇಳಲಾಗಿದೆ.
ಪತಿ-ಪತ್ನಿ ನಡುವಿನ ಜಗಳ ಸಂಬಂಧ ಸಾಕಷ್ಟು ಬಾರಿ ಗ್ರಾಮದ ಮುಖಂಡರು ನ್ಯಾಯ ಪಂಚಾಯಿತಿಯನ್ನು ನಡೆಸಿದ್ದರು. ಆದರೂ ಜಗಳ ಮಾತ್ರ ನಿಂತಿರಲಿಲ್ಲ. ನಿನ್ನೆ ರಾತ್ರಿಯೂ ಗಂಡ ಹೆಂಡತಿ ನಡುವೆ ಮತ್ತೆ ಜಗಳ ಆರಂಭವಾಗಿತ್ತು. ಆರೋಪಿ ರವಿ ಮಕ್ಕಳಿಗೆ ಪಾನಿಪುರಿ ತಿನಿಸುತ್ತಿದ್ದ ವೇಳೆ ಜಗಳ ಶುರುವಾಗಿತ್ತು.
ಇಬ್ಬರ ನಡುವಿನ ವಾಗ್ವಾದ ತಾರಕಕ್ಕೇರಿದಾಗ ಪತ್ನಿ ಯೋಗಿತಾಗೆ ಮನಬಂದಂತೆ ಥಳಿಸಿದ ರವಿ, ಬಳಿಕ ಪತ್ನಿಯನ್ನು ಕೋಣೆಯೊಳಗೆ ಎಳೆದೊಯ್ದಿದ್ದ. ಈ ವೇಳೆ ಮಕ್ಕಳು ತಕ್ಷಣ ಪಕ್ಕದ ಮನೆಯವರಿಗೆ ಜಗಳದ ವಿಚಾರ ತಿಳಿಸಿದರು. ನೆರೆಮನೆಯವರು ಬರುವಷ್ಟರಲ್ಲಿ ರವಿ ಪತ್ನಿಯನ್ನು ಕೊಲೆಗೈದಿದ್ದ. ಈ ವಿಚಾರವನ್ನು ಯಾರಿಗೂ ಹೇಳಬೇಡಿ ಎಂದು ಮಕ್ಕಳಿಗೆ ಹೇಳಿ, ರವಿ ಪರಾರಿಯಾಗಿದ್ದಾನೆ.
ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು