SSLC ಪರೀಕ್ಷೆ-1ರ ವೇಳಾಪಟ್ಟಿ ಪ್ರಕಟ

Team Newsnap
1 Min Read

ಬೆಂಗಳೂರೂ : 2024-25ನೇ ಸಾಲಿನ ಮಾರ್ಚ್ / ಏಪ್ರಿಲ್ 2024ರ SSLC ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪ್ರಕಟಿಸಿದೆ.

ದಿನಾಂಕ 25-03-2024 ರಿಂದ 06-04-2024 ರವರೆಗೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿದೆ.

ಇದೀಗ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದ್ದು , ಎಲ್ಲ ಸರ್ಕಾರಿ/ ಅನುದಾನಿತ/ ಅನುದಾನರಹಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಅಂತಿಮ ವೇಳಾಪಟ್ಟಿಯನ್ನು ವಿದ್ಯಾರ್ಥಿಗಳಿಗೆ ಖುದ್ದಾಗಿ ಗಮನಿಸಲು ಸೂಚಿಸಿದ್ದಾರೆ .

ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆ ಬರೆಯಲು 3 ಗಂಟೆ ಮತ್ತು ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಭಾಷೆ ಮತ್ತು ತೃತೀಯ ಭಾಷೆ ಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

ಇದನ್ನು ಓದಿ – ‘ಲೋಕಸಭೆ ಚುನಾವಣೆ’ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲೇ ನಡೆಯಲಿದೆ : ಡಿಕೆಶಿ ಘೋಷಣೆ

image 3
image 4
Share This Article
Leave a comment