ನಾಳೆಯಿಂದ SSLC EXAM – ಹಿಜಾಬ್ ಧರಿಸಿ ಬಂದ್ರೆ ಪರೀಕ್ಷೆಗೆ NO ENTRY : ಸರ್ಕಾರದ ಆದೇಶ

Team Newsnap
1 Min Read

ನಾಳೆಯಿಂದ SSLC ಪರೀಕ್ಷೆ ಆರಂಭ. ಕೌಂಟ್‌ಡೌನ್‌ ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಪ್ರವೇಶವೇ ಇಲ್ಲ.

ಹಿಜಾಬ್ ಸಂಘರ್ಷದ ನಡುವೆ ರಾಜ್ಯದಲ್ಲಿ ಸೋಮವಾರದಿಂದ ಎಸ್‌ಎಸ್ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಇಂದು ಸುತ್ತೋಲೆ ಕೂಡ ಹೊರಡಿಸಿದೆ. ಇದು ಮುಸ್ಲಿಂ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಗೊಂದಲಕ್ಕೀಡು ಮಾಡಿದೆ.

ರಾಜ್ಯದಲ್ಲಿ ಹಿಜಾಬ್ ಸಂಘರ್ಷಕ್ಕೆ ಇನ್ನೂ ತೆರೆ ಬಿದ್ದಿಲ್ಲ. ಮುಸ್ಲಿಂ ವಿದ್ಯಾರ್ಥಿನಿಯರು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸರ್ವೋಚ್ಛ ನ್ಯಾಯಾಲಯ ಇನ್ನೂ ಯಾವುದೇ ತೀರ್ಪು ನೀಡಿಲ್ಲ. ಹೀಗಿರುವಾಗ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕೌಂಟ್‌ಡೌನ್ ಶುರುವಾಗಿದೆ.

ಸೋಮವಾರದಿಂದ ಪರೀಕ್ಷೆ ಆರಂಭವಾಗಲಿದೆ.ಸುಪ್ರೀಕೋರ್ಟ್‌ ಇನ್ನೂ ತೀರ್ಪು ನೀಡಿಲ್ಲ.ಪೋಷಕರು ಹಾಗೂ ವಿದ್ಯಾರ್ಥಿಗಳು ಚಿಂತೆಗೀಡಾಗಿದ್ದಾರೆ. ಸರ್ಕಾರ ಮಾತ್ರ ಪರೀಕ್ಷೆಗೆ ಸಮವಸ್ತ್ರ ನಿಯಮ ಕಡ್ಡಾಯಗೊಳಿಸಿ ಸುತ್ತೋಲೆ
ಹೊರಡಿಸಿದೆ. ಹೀಗಾಗಿ, ಸಮವಸ್ತ್ರ ಧರಿಸಿ ಪರೀಕ್ಷೆಗೆ ಹೋಗ್ಬೇಕಾ? ಇಲ್ಲ, ಹಿಜಾಬ್ ಧರಿಸಿ ಮನೆಯಲ್ಲಿ ಕೂರಬೇಕಾ? ಎಂಬ ಗೊಂದಲದಲ್ಲಿ ವಿದ್ಯಾರ್ಥಿನಿಯರು ಸಿಲುಕಿದ್ದಾರೆ.

Share This Article
Leave a comment